ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಆರ್ಥಿಕ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ಕೋವಿಡ್-19 ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಇಡೀ ರಾಜ್ಯ ಲಾಕ್ ಡೌನ್ ಆಗಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಆರ್ಥಿಕ ಸಹಾಯ ಮಾಡಲು ಉದ್ದೇಶಿಸಲಾಗಿದೆ.

ಬೆಂಗಳೂರು: ಕೋವಿಡ್-19 ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಇಡೀ ರಾಜ್ಯ ಲಾಕ್ ಡೌನ್ ಆಗಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಆರ್ಥಿಕ ಸಹಾಯ ಮಾಡಲು ಉದ್ದೇಶಿಸಲಾಗಿದೆ.
ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಕಲಾವಿದರು/ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ನಿರತ ಕಲಾವಿದರಾಗಿದ್ದು, ಕನಿಷ್ಠ 10 ವರ್ಷ ಕಲಾಸೇವೆ ಸಲ್ಲಿಸಿರಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರಬಾರದು. ಮತ್ತು ಯಾವುದೇ ಸರ್ಕಾರಿ (ರಾಜ್ಯ/ಕೇಂದ್ರ/ನಿಗಮ/ಮಂಡಳಿ/ಸರ್ಕಾರಿ ಅನುದಾನಿತ ಸಂಸ್ಥೆಗಳು ಮತ್ತು ಅರೆ ಸರಕಾರಿ ಸಂಸ್ಥೆಗಳು) ನೌಕರರಾಗಿರಬಾರದು.
ಈ ವ್ಯಾಪ್ತಿಗೆ ಒಳಪಡುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಲಾವಿದರು/ಸಾಹಿತಿಗಳು ತಮ್ಮ ಹೆಸರು, ವಿಳಾಸ, ಕಲಾಪ್ರಕಾರ, ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಸಂಖ್ಯೆ, ಬ್ರಾಂಚ್ ಹಾಗೂ ಐ.ಎಫ್.ಎಸ್.ಸಿ. ಕೋಡ್ (ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ ಲಗತ್ತಿಸಿ) ವಿವರಗಳನ್ನು ಒಳಗೊಂಡ ಅರ್ಜಿಯನ್ನು ಬಿಳಿ ಹಾಳೆಯ ಮೇಲೆ ಸ್ವವಿವರವನ್ನು ಸಿದ್ದಪಡಿಸಿ, ಏಪ್ರಿಲ್ 27 ರೊಳಗಾಗಿ ಇ-ಮೇಲ್ ವಿಳಾಸ: dkc.bangarural@gmail.com ಗೆ ಹಾಗೂ ಮೊಬೈಲ್ ಸಂಖ್ಯೆ: 7760599579/ 8746939150 ಗೆ ವಾಟ್ಸಪ್ ಮಾಡಬಹುದಾಗಿದೆ.
ತಪ್ಪು ಮಾಹಿತಿ ನೀಡಿ ಇದರ ಲಾಭ ಪಡೆದವರ ಮೇಲೆ ವಿಪತ್ತು ನಿರ್ವಹಣಾ ಅಧಿನಿಯಮದನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಆರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


