ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಉದ್ಯೋಗಿಗೆ 14 ದಿನ ಕ್ವಾರಂಟೈನ್
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯೊಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬುಧವಾರ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯೊಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬುಧವಾರ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯ ಈ ಉದ್ಯೋಗಿ, ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್‌ನಿಂದ ಇತ್ತೀಚೆಗೆ ಸಾವನ್ನಪ್ಪಿದ ಬಂಟ್ವಾಳ ಮೂಲದ ಮಹಿಳೆಯ ದೂರದ ಸಂಬಂಧಿಯಾಗಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು 14 ದಿನಗಳ ಕ್ವಾರಂಟೈನ್ ಗೆ ಕಳುಹಿಸಲಾಗಿದೆ.
ವರದಿಗಳ ಪ್ರಕಾರ, ಮಹಿಳೆಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನು ಜಿಲ್ಲಾಧಿಕಾರಿ ಉದ್ಯೋಗಿ ಭೇಟಿಯಾಗಿದ್ದಾರೆ. ಅಲ್ಲದೆ, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಏಪ್ರಿಲ್ 18 ರಂದು ವಿಚಾರಿಸಿದ್ದರು. ಆದರೆ, ಆಸ್ಪತ್ರೆಯಲ್ಲಿದ್ದಾಗ ಮತ್ತು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಹಿಳೆಯನ್ನು ಉದ್ಯೋಗಿ ಭೇಟಿ ಮಾಡಿರಲಿಲ್ಲ.
ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ 14 ದಿನಗಳ ಕಾಲ ಉದ್ಯೋಗಿಯನ್ನು ಕ್ವಾರಂಟೈನ್ ಕಳುಹಿಸಲು ಜಿಲ್ಲಾಧಿಕಾರಿ ಕಚೇರಿ ನಿರ್ಧರಿಸಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಯಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


