ಆರೋಗ್ಯ ಕಾರ್ಯಕರ್ತರಿಗೆ ಸಶಸ್ತ್ರ ಭದ್ರತೆ ನೀಡಿ: ಹೈಕೋರ್ಟ್
ಆರೋಗ್ಯ ಮತ್ತು ಆಶಾ ಕಾರ್ಯಕರ್ತರಿಗೆ ಸಶಸ್ತ್ರ ಭದ್ರತೆ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಬೆಂಗಳೂರು: ಆರೋಗ್ಯ ಮತ್ತು ಆಶಾ ಕಾರ್ಯಕರ್ತರಿಗೆ ಸಶಸ್ತ್ರ ಭದ್ರತೆ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಪಾದರಾಯನಪುರದಲ್ಲಿ ಗಲಭೆ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ಬಿ ವಿ ನಾಗರತ್ನ ಅವರನ್ನೊಳಗೊಂಡವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ವೈದ್ಯರು, ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ಕ್ವಾರಂಟೈನ್ ಗೆ ಒಳಗಾಗಿರುವ ಸ್ಥಳಕ್ಕೆ ಹೋಗುವಾಗ ಅವರ ಜೊತೆ ಪೊಲೀಸರನ್ನು ಕಳುಹಿಸುವಂತೆ ಸೂಚಿಸಿದೆ. ಬೆಂಗಳೂರಿನ ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಗಲಭೆ ನಡೆದಿತ್ತು. ಬಿಬಿಎಂಪಿ, ಆರೋಗ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆಗೆ ಪ್ರಯತ್ನ ನಡೆಸಲಾಗಿತ್ತು. ಈ ಘಟನೆ ಸಂಬಂಧ
ಇದುವರೆಗೂ 119 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ವೈದ್ಯರು, ಆರೋಗ್ಯ ಮತ್ತು ಆಶಾ ಕಾರ್ಯಕರ್ತರ ಭದ್ರತೆಗೆ ಯಾವ ಮಾರ್ಗಸೂಚಿ ರೂಪಿಸಲಾಗಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


