ರಾಜ್ಯ

ಡೆಲಿವರಿ ಬಾಯ್ಸ್ ವೇಷದಲ್ಲಿ 2 ತಲೆ ಹಾವು ಮಾರಾಟಕ್ಕೆ ಯತ್ನಿಸಿದವರು ಸಿಸಿಬಿ ಬಲೆಗೆ

ಡೆಲಿವರಿ ಬಾಯ್ಸ್ ವೇಷ ಧರಿಸಿ ಅಕ್ರಮವಾಗಿ ಎರಡು ತಲೆ ಹಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬೆಂಗಳೂರು ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಡೆಲಿವರಿ ಬಾಯ್ಸ್ ವೇಷದಲ್ಲಿ 2 ತಲೆ ಹಾವು ಮಾರಾಟಕ್ಕೆ ಯತ್ನಿಸಿದವರು ಸಿಸಿಬಿ ಬಲೆಗೆ
ಡೆಲಿವರಿ ಬಾಯ್ಸ್ ವೇಷದಲ್ಲಿ 2 ತಲೆ ಹಾವು ಮಾರಾಟಕ್ಕೆ ಯತ್ನಿಸಿದವರು ಸಿಸಿಬಿ ಬಲೆಗೆ
Published On :

ಬೆಂಗಳೂರು: ಡೆಲಿವರಿ ಬಾಯ್ಸ್ ವೇಷ ಧರಿಸಿ ಅಕ್ರಮವಾಗಿ ಎರಡು ತಲೆ ಹಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬೆಂಗಳೂರು ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 

ಆನ್'ಲೈನ್ ಡೆಲಿವರಿ ಬಾಯ್ ವೇಷದಲ್ಲಿ ಹಾಗೂ ಆನ್'ಲೈನ್ ಫುಡ್ ಡೆಲಿವರಿ ಮಾಡಲು ಬಳಕೆ ಮಾಡುವ ಬ್ಯಾಗ್ ನಲ್ಲಿ ಹಾವನ್ನು ಕಳ್ಳ ಸಾಗಾಣೆ ಮಾಡಲು ಯತ್ನಿಸುತ್ತಿದ್ದರು. ಈ ವೇಳೆ ಪೊಲೀಸರ ಕಣ್ಣಿಗೆ ಬಿದ್ದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಕೊರೋನಾ ವೈರಸ್ ಮಟ್ಟ ಹಾಕುವ ತಲುವಾಗಿ ರಾಜ್ಯ ಹಾಗೂ ದೇಶದಾದ್ಯಂತ ಲಾಕ್'ಡೌನ್ ಘೋಷಣೆ ಮಾಡಲಾಗಿತ್ತು. ಅಗತ್ಯ ವಸ್ತುಗಳ ಪೂರೈಕೆ ಮಾಡುವವರಿಗೆ ಮಾತ್ರ ಇದರಿಂದ ವಿನಾಯಿತಿ ನೀಡಲಾಗಿದೆ. ಆದರೆ, ಇದನ್ನೇ ದುರ್ಬಳಕೆ ಮಾಡಿಕೊಂಡ ಈ ಯುವಕರು 2 ತಲೆ ಹಾವನ್ನು ಮಾರಾಟ ಮಾಡಲು ಯತ್ನಿಸಿದ್ದಾರೆ. 

ಪ್ರಸ್ತುತ ಯುವಕರನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ಹಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.