ರಾಜ್ಯ

ಅರ್ನಾಬ್ ಗೋಸ್ವಾಮಿಗಿಂತ ಸೋನಿಯಾ ಗಾಂಧಿ ಹೆಚ್ಚಿನ ಮಟ್ಟಿಗೆ ಭಾರತೀಯರು: ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ನಮ್ಮೆಲ್ಲರಂತೆ ಭಾರತೀಯರು. ಪತ್ರಕರ್ತ ಅರ್ನಾಬ್ ಗೋಸ್ವಾಮಿಯವರಿಗಿಂತಲೂ ಹೆಚ್ಚಿನ ಮಟ್ಟಿಗೆ ಭಾರತೀಯರು. ದೇಶದಲ್ಲಿ ಸಾಮರಸ್ಯ ಮತ್ತು ಭಾತೃತ್ವ ಬೆಳೆಯಲು ಸೋನಿಯಾ ಗಾಂಧಿಯವರು ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಾಡಿಹೊಗಳಿದ್ದಾರೆ.

ಅರ್ನಾಬ್ ಗೋಸ್ವಾಮಿಗಿಂತ ಸೋನಿಯಾ ಗಾಂಧಿ ಹೆಚ್ಚಿನ ಮಟ್ಟಿಗೆ ಭಾರತೀಯರು: ಸಿದ್ದರಾಮಯ್ಯ
Published On :

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ನಮ್ಮೆಲ್ಲರಂತೆ ಭಾರತೀಯರು. ಪತ್ರಕರ್ತ ಅರ್ನಾಬ್ ಗೋಸ್ವಾಮಿಯವರಿಗಿಂತಲೂ ಹೆಚ್ಚಿನ ಮಟ್ಟಿಗೆ ಭಾರತೀಯರು. ದೇಶದಲ್ಲಿ ಸಾಮರಸ್ಯ ಮತ್ತು ಭಾತೃತ್ವ ಬೆಳೆಯಲು ಸೋನಿಯಾ ಗಾಂಧಿಯವರು ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಾಡಿಹೊಗಳಿದ್ದಾರೆ.

ಪಾಲ್ಘರ್ ಸಾಧುಗಳ ಹತ್ಯೆ ಪ್ರಕರಣ ಕುರಿತಾಗಿ ಸೋನಿಯಾ ಗಾಂಧಿಯವರು ಏಕೆ ಮೌನ ವಹಿಸಿದ್ದಾರೆ, ಅಲ್ಪಸಂಖ್ಯಾತರಿಗೆ ಹೀಗೆ ಆಗುತ್ತಿದ್ದರೆ ಅವರು ಸುಮ್ಮನೆ ಇರುತ್ತಿದ್ದರೆ ಎಂದು ಕೇಳಿ ರಿಪಬ್ಲಿಕ್ ಟಿವಿಯಲ್ಲಿ ಸಾಧುಗಳು ಮತ್ತು ಇತರರ ಜೊತೆ ಅರ್ನಾಬ್ ಗೋಸ್ವಾಮಿ ಚರ್ಚೆ ನಡೆಸಿದ್ದರು.

ವಾಹಿನಿಯ ಈ ಚರ್ಚಾ ಕಾರ್ಯಕ್ರಮವನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪತ್ರಿಕೋದ್ಯಮವು ಗೌರವಾನ್ವಿತ ವೃತ್ತಿಯಾಗಿದ್ದು, ಇದು ಪ್ರಜಾಪ್ರಭುತ್ವದ 3 ಸ್ತಂಭಗಳನ್ನು ಮೌಲ್ಯಮಾಪನ ಮಾಡಲು ಜನರಿಗೆ ಅವಕಾಶ ಕೊಡುತ್ತದೆ.

ಆದರೆ ಪತ್ರಿಕೋದ್ಯಮ ವೃತ್ತಿಯನ್ನು ಹೇಗೆ ಮಾಡಬಾರದು ಎಂಬುದಕ್ಕೆ ಉದಾಹರಣೆಯಾಗಿ ಅರ್ನಾಬ್ ಗೋಸ್ವಾಮಿಯವರು ಇದ್ದಾರೆ. ಸಂಬಂಧವಿಲ್ಲದ ವಿಷಯದಲ್ಲಿ ಸೋನಿಯಾ ಗಾಂಧಿಯವರನ್ನು ಉಲ್ಲೇಖಿಸುವುದು ಮಾನಹಾನಿ ಮಾಡಿದಂತೆ, ಇದು ಅವರೊಳಗಿರುವ ಒಬ್ಬ ದ್ವೇಷಶಾಸ್ತ್ರಜ್ಞನನ್ನು ಬಹಿರಂಗಪಡಿಸುತ್ತದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.