ಹಾವೇರಿ: ನಕಲಿ ಬಿಡಿ ಬೀಜ ದಾಸ್ತಾನು; ಸುಮಾರು 6 ಕೋಟಿ ರೂ. ಮೌಲ್ಯದ ಬೀಜ ವಶ
ನಕಲಿ ಬಿಡಿ ಬೀಜಗಳನ್ನು ದಾಸ್ತಾನು, ಮಾರಾಟ ಮಾಡಲು ಸಿದ್ಧವಾಗಿದ್ದ ಬೀಜ ಮಾರಾಟ ಕೇಂದ್ರದ ಮೇಲೆ ದಾಳಿ ನಡೆಸಿದ ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳು, ಸುಮಾರು ಆರು ಕೋಟಿ ರೂ.ಮೌಲ್ಯದ ಅಕ್ರಮ ದಾಸ್ತಾನನ್ನು ವಶಪಡಿಸಿಕೊಂಡಿದ್ದಾರೆ.

ಹಾವೇರಿ: ನಕಲಿ ಬಿಡಿ ಬೀಜಗಳನ್ನು ದಾಸ್ತಾನು, ಮಾರಾಟ ಮಾಡಲು ಸಿದ್ಧವಾಗಿದ್ದ ಬೀಜ ಮಾರಾಟ ಕೇಂದ್ರದ ಮೇಲೆ ದಾಳಿ ನಡೆಸಿದ ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳು, ಸುಮಾರು ಆರು ಕೋಟಿ ರೂ.ಮೌಲ್ಯದ ಅಕ್ರಮ ದಾಸ್ತಾನನ್ನು ವಶಪಡಿಸಿಕೊಂಡಿದ್ದಾರೆ.
ಹಾವೇರಿ ಜಿಲ್ಲಾ ಜಂಟಿ ನಿರ್ದೇಶಕ ಮಂಜುನಾಥ್ ಹಾಗೂ ಸಿಪಿಐ ಭಾಗ್ಯವತಿ ನೇತೃತ್ವದ ಜಂಟಿ ತಂಡಗಳ ನೇತೃತ್ವದಲ್ಲಿ ಕಳೆದ ರಾತ್ರಿ ಬ್ಯಾಡಗಿ ಪಟ್ಟಣದ ಸೂರ್ಯ ಕೋಲ್ಡ್ ಸ್ಟೋರೆಜ್ ಮೇಲೆ ದಾಳಿ ನಡೆಸಿದೆ. ಕೃಷಿ ಅಧಿಕಾರಿಗಳು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಸಿಪಿಐ ಭಾಗ್ಯವತಿ, ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು , 2,950 ಕ್ವಿಂಟಾಲ್ ನಕಲಿ ಬಿಡಿಬೀಜಗಳನ್ನು ಹಾಗೂ ಛತ್ರ ಗ್ರಾಮದ ವಕ್ರತುಂಡ ಕೋಲ್ಡ್ ಸ್ಟೋರೆಜ್ ನಲ್ಲಿ ಇರಿಸಲಾಗಿದ್ದ ಸುಮಾರು 2,800 ಕ್ವಿಂಟಾಲ್ ನಕಲಿ ಬಿಡಿಬೀಜಗಳನ್ನು ವಶಪಡಿಸಿಕೊಂಡಿದೆ. ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆ ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


