ಕೋವಿಡ್-19: ಮೃತದೇಹದಿಂದ ಕೊರೋನಾ ಸೋಂಕಿಗೆ ಒಳಗಾಗುವ ಸಾಧ್ಯತೆ ಇಲ್ಲ; ದ.ಕ. ಜಿಲ್ಲಾಧಿಕಾರಿ ಸ್ಪಷ್ಟನೆ
ಕೊರೋನಾ ವೈರಸ್ ಸೋಂಕಿತ 75 ವರ್ಷದ ಮಹಿಳೆ ಮೃತದೇಹದ ಅಂತ್ಯಕ್ರಿಯೆ ವಿರುದ್ಧ ಸ್ಥಳೀಯರು ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ಶುಕ್ರವಾರ ಸ್ಪಷ್ಟನೆ ನೀಡಿ, ಮೃತದೇಹದಿಂದ ಯಾರೊಬ್ಬರಿಗೂ ಸೋಂಕು ತಗುಲುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

ಮಂಗಳೂರು: ಕೊರೋನಾ ವೈರಸ್ ಸೋಂಕಿತ 75 ವರ್ಷದ ಮಹಿಳೆ ಮೃತದೇಹದ ಅಂತ್ಯಕ್ರಿಯೆ ವಿರುದ್ಧ ಸ್ಥಳೀಯರು ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ಶುಕ್ರವಾರ ಸ್ಪಷ್ಟನೆ ನೀಡಿ, ಮೃತದೇಹದಿಂದ ಯಾರೊಬ್ಬರಿಗೂ ಸೋಂಕು ತಗುಲುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.
ಕೋವಿಡ್ -19 ರೋಗಿಗಳ ಮೃತದೇಹಗಳ ಅಂತ್ಯಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರವು ಸೂಚಿಸಿರುವ ಶಿಷ್ಟಾಚಾರಗಳನ್ನು ಅನುಸರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊವಿಡ್-19ನಿಂದ ಸಾವನ್ನಪ್ಪಿದವರನ್ನು ಅವರವರ ಧಾರ್ಮಿಕ ಪದ್ಧತಿಗಳಂತೆ ಸಮಾಧಿ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಂತಿಮ ವಿಧಿ-ವಿಧಾನಗಳನ್ನು ನಡೆಸಲು 20 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡಲಾಗುವುದಿಲ್ಲ. ಮೃತ ವ್ಯಕ್ತಿಯ ಹತ್ತಿರದ ಸಂಬಂಧಿಗಳಿಗೆ ಸಹ ದೇಹವನ್ನು ಸ್ಪರ್ಶಿಸಲು ಇಲ್ಲವೇ ಮೃತದೇಹದ ಸ್ನಾನಕ್ಕೆ ಅನುಮತಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


