ಉಚಿತ ಅಕ್ಕಿ ನೀಡುವ ಯೋಜನೆ ಜಾರಿಯಲ್ಲಿದ್ದರೂ, ಪಡೆಯುವವರೇ ಇಲ್ಲ: ಸಚಿವ ಗೋಪಾಲಯ್ಯ
ಉಚಿತ ಅಕ್ಕಿ ನೀಡುವ ಯೋಜನೆ ಜಾರಿಯಲ್ಲಿದ್ದರೂ, ಪಡೆಯುವವರ ಸಂಖ್ಯೆ ಮಾತ್ರ ಕಡಿಮೆಯೇ ಇದೆ ಎಂದು ಆಹಾರ ಮತ್ತು ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರು ಹೇಳಿದ್ದಾರೆ.

ಬೆಂಗಳೂರು: ಉಚಿತ ಅಕ್ಕಿ ನೀಡುವ ಯೋಜನೆ ಜಾರಿಯಲ್ಲಿದ್ದರೂ, ಪಡೆಯುವವರ ಸಂಖ್ಯೆ ಮಾತ್ರ ಕಡಿಮೆಯೇ ಇದೆ ಎಂದು ಆಹಾರ ಮತ್ತು ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರು ಹೇಳಿದ್ದಾರೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಮೂರು ತಿಂಗಳ ಕಾಲ ಉಚಿತ ಅಕ್ಕಿ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಯೋಜನೆ ಜಾರಿಯಾಗಿ ಎರಡು ವಾರಗಳೇ ಕಳೆದಿದ್ದರೂ, ಪಡಿತರ ಅಂಗಡಿಗಳಲ್ಲಿ ಜನರ ಸಂಖ್ಯೆ ಮಾತ್ರ ಕಡಿಮೆಯೇ ಇದೆ. ಬಿಪಿಎಲ್ ಕಾರ್ಡ್'ಗೆ ಅರ್ಜಿ ಸಲ್ಲಿಸಿರುವ 1.89 ಲಕ್ಷ ಮಂದಿಯ ಪೈಕಿ ಕೇವಲ 18,000 ಮಂದಿ ಮಾತ್ರ ಪಡಿತರ ಪಡೆಯುತ್ತಿದ್ದಾರೆಂದು ಹೇಳಿದ್ದಾರೆ.
ಬಿಪಿಎಲ್ ಕಾರ್ಡ್'ಗೆ ಅರ್ಜಿ ಸಲ್ಲಿಸಿರುವವರಿಗೆ ಪ್ರತೀ ತಿಂಗಳು ಉಚಿತವಾಗಿ 10 ಕೆಜಿ ಅಕ್ಕಿ ನೀಡುವುದಾಗಿ ಸರ್ಕಾರ ತಿಳಿಸಿದೆ. ಆದರೆ, ಅರ್ಜಿ ಸಲ್ಲಿಸಿರುವ ಲಕ್ಷ ಮಂದಿಯಲ್ಲಿ ಕೆಲವೇ ಜನರು ಪಡಿತರ ಪಡೆಯುತ್ತಿದ್ದಾರೆ. ಯೋಜನೆ ಬಗ್ಗೆ ಮತ್ತಷ್ಟು ಜಾಹೀರಾತುಗಳನ್ನು ನೀಡಲಾಗುತ್ತದೆ. ಅಲ್ಲದೆ. 20,48,000 ಮಂದಿ ಎಪಿಎಲ್ ಕಾರ್ಡ್ ಗಳನ್ನು ಪಡೆದಿದ್ದು, ಇವರಿಗೆ ರೂ.15 ರಂತೆ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಇದಲ್ಲದೆ, ಗ್ರಾಸೆರಿ ಕಿಟ್ಸ್ ಗಳನ್ನೂ ನೀಡಲಾಗುತ್ತದೆ. ಸ್ಥಳೀಯ ರಾಜಕೀಯ ವ್ಯಕ್ತಿಗಳು ಸಮಾಜ ಕಲ್ಯಾಣ ಸಂಘಟನೆಗಳೂ ಕೂಡ ಬಡವರಿಗೆ ಸಹಾಯ ಮಾಡುತ್ತಿರುವುದರಿಂದ ಜನರು ಪಡಿತರ ಅಂಗಡಿಗಳತ್ತ ಮುಖ ಮಾಡುತ್ತಿಲ್ಲ.
ಪಿಡಿಎಸ್ ಅಡಿಯಲ್ಲಿ ಸ್ವಾಧೀನಪಡಿಸಿಕೊಂಡಿದ್ದ ಶೇ.8-10 ರಷ್ಟು ಷೇರುಗಳು ಪ್ರತೀವರ್ಷ ಫಲಾನುಭವಿಗಳಿಗೆ ಪ್ರಯೋಜನ ನೀಡುತ್ತಿತ್ತು. ಆದರೆ, ಈ ಬಾರಿ ರಾಜ್ಯ ಸರ್ಕಾರ ದಾಖಲೆ ಮುರಿದಿದ್ದು, ಬಿಪಿಎಲ್ ಕಾರ್ಡುದಾರರು ಶೇ.93.8ರಷ್ಟು ಆಹಾರ ಧಾನ್ಯಗಳನ್ನು ಪಡೆದುಕೊಂಡಿದ್ದಾರೆಂದು ತಿಳಿಸಿದ್ದಾರೆ.
ಇದೇ ವೇಳೆ ಹೆಚ್ಚುವರಿಯನ್ನು ಸ್ಯಾಟಿಟೈಸ್ ಬಳಕೆ ಬಳಸುವಂತೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ಮಾತುಕತೆಗಳನ್ನೂ ನಡೆಸಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


