ರಾಜ್ಯ

ಕೋರೋನಾ: ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಆಹಾರ, ಔಷಧಿ ನೀಡಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೊಬೋಟ್ ನಿಯೋಜನೆ

ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಂದ ಇತರರಿಗೆ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಸರ್ಕಾರ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಆಹಾರ ಹಾಗೂ ಔಷಧಿಗಳನ್ನು ನೀಡಲು ರೊಬೋಟ್ ನಿಯೋಜಿಸಿದೆ.

ಕೋರೋನಾ: ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಆಹಾರ, ಔಷಧಿ ನೀಡಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೊಬೋಟ್ ನಿಯೋಜನೆ
ಕೋರೋನಾ: ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಆಹಾರ, ಔಷಧಿ ನೀಡಲು ವಿಕ್ಟೋರಿಯಾ ಆಸ್ಪತ್ರೆ ರೊಬೋಟ್ ನಿಯೋಜನೆ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಂದ ಇತರರಿಗೆ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಸರ್ಕಾರ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಆಹಾರ ಹಾಗೂ ಔಷಧಿಗಳನ್ನು ನೀಡಲು ರೊಬೋಟ್ ನಿಯೋಜಿಸಿದೆ. 

ನಿಯೋಜನೆಗೊಂಡಿರುವ ಈ ರೊಬೋಟ್ ಸೋಂಕಿತರ ಆಸುಪಾಸಿನಲ್ಲೇ ತಿರುಗಾಡಲಿದ್ದು, ಸಮಯಕ್ಕೆ ಸರಿಯಾಗಿ ರೋಗಿಗಳಿಗೆ ಔಷಧಿ ಹಾಗೂ ಆಹಾರವನ್ನು ನೀಡಲಿದೆ. ಇದರಿಂದ ಆಸ್ಪತ್ರೆಯ ಸಿಬ್ಬಂದಿಗಳಿಗೂ ಸೋಂಕು ತಗುಲುವುದು ನಿಯಂತ್ರಣಗೊಳ್ಳಲಿದೆ. 

ರಾಜ್ಯದಲ್ಲಿ ಈವರೆಗೂ 500 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 18 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಸೋಂಕಿತ 500 ಮಂದಿಯ ಪೈಕಿ 158 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.