ಕೊರೋನಾ ವೈರಸ್: ಕಲಬುರಗಿಯಲ್ಲಿ ಮತ್ತೆ 6 ಹೊಸ ಪಾಸಿಟಿವ್ ಪ್ರಕರಣ ದೃಢ, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 518ಕ್ಕೆ ಏರಿಕೆ
ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 518ಕ್ಕೆ ಏರಿಕೆಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 6 ಮಂದಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ದೃಢವಾಗಿದೆ.

ಕಲಬುರಗಿ: ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 518ಕ್ಕೆ ಏರಿಕೆಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 6 ಮಂದಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ದೃಢವಾಗಿದೆ.
ಈ ಬಗ್ಗೆ ಕಲಬುರಗಿ ಜಿಲ್ಲಾಡಳಿತ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇಂದು ಜಿಲ್ಲೆಯಲ್ಲಿ ಆರು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅಂತೆಯೇ ಇಂದು ಕಲಬುರಗಿ ಜಿಲ್ಲೆಯ ಆಳಂದ ನಿವಾಸಿ 54 ವರ್ಷದ ವ್ಯಕ್ತಿ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. ಇಂದು ಮೃತ ವ್ಯಕ್ತಿಗೆ ಏಪ್ರಿಲ್ 21ರಂದು ಕೊರೊನಾ ಪಾಸಿಟಿವ್ ಬಂದಿತ್ತು. ಉಸಿರಾಟದ ತೊಂದರೆಯಿಂದ ಜಿಮ್ಸ್ ಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಆದರೆ ಸೋಂಕಿತರ ವಿವರವನ್ನು ಜಿಲ್ಲಾಡಳಿತ ಪ್ರಕಟಿಸಿಲ್ಲ. ಇಂದಿನ ಆರು ಹೊಸ ಪ್ರಕರಣಗಳ ಮೂಲಕ ಕಲಬುರಗಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.

ಇಂದು ಬೆಳಗ್ಗೆ ಬಿಡುಗಡೆಯಾದ ಬುಲೆಟಿನ್ ನಲ್ಲಿ 8 ಜನಕ್ಕೆ ಮತ್ತು ಸಂಜೆ ಬುಲೆಟಿನ್ ನಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದನ್ನು ಆರೋಗ್ಯ ಇಲಾಖೆ ಖಚಿತಪಡಿಸಿತ್ತು. ಸದ್ಯ ಕಲಬುರಗಿಯಲ್ಲಿ ಹೊಸ 6 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಒಟ್ಟು 15 ಮಂದಿಗೆ ಸೋಂಕು ತಗುಲಿದೆ.
ಕಲಬುರಗಿಯ ಮೋಮಿನಪುರ ನಿವಾಸಿಯಾದ ರೋಗಿ ಸಂಖ್ಯೆ-395 ನೇರ ಸಂಪರ್ಕದಲ್ಲಿ ಬಂದ ನಗರದ 6 ಜನರಿಗೆ ಸೋಮವಾರ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ.ತಿಳಿಸಿದ್ದಾರೆ. ನಗರದ ಮೋಮಿನಪುರ ಪ್ರದೇಶದ 45 ಮತ್ತು 40 ವರ್ಷದ ಮಹಿಳೆಗೆ, 22 ವರ್ಷದ ಯುವತಿಗೆ ಹಾಗೂ 55 ವರ್ಷದ ಪುರುಷನಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. ಅದೇ ರೀತಿ ಇಸ್ಲಾಮಾಬಾದ ಕಾಲೋನಿ ಪ್ರದೇಶ ದ 28 ವರ್ಷದ ಯುವತಿ ಮತ್ತು 43 ವರ್ಷದ ಪುರುಷನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
Related Article
ಕೊರೋನಾ ವೈರಸ್: ಪಾದರಾಯನಪುರ ಗಲಾಟೆ ಪ್ರಕರಣದ ಪ್ರಮುಖ ಆರೋಪಿ ಇರ್ಫಾನ್ ಬಂಧನ
ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ, 20ಕ್ಕೇರಿದ ಸಾವಿನ ಸಂಖ್ಯೆ!
ರಾಜ್ಯದಲ್ಲಿ ಇಂದು 9 ಹೊಸ ಕೊರೋನಾವೈರಸ್ ಪ್ರಕರಣಗಳು ಪತ್ತೆ: ಒಟ್ಟು ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ
ಲಾಕ್ ಡೌನ್ ನಡುವೆ ಶಿವಮೊಗ್ಗದಿಂದ ತಮಿಳು ನಾಡಿಗೆ ಔಷಧಿ ತಲುಪಿಸಿದ ಕೊರೋನಾ ಸೈನಿಕರು!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


