ಕಲಬುರಗಿ: ಆಶಾ ಕಾರ್ಯಕರ್ತೆಗೆ ಯುವಕನಿಂದ ಪಾದಪೂಜೆ
ಪ್ರಸ್ತುತ ಕಲಬುರಗಿ ಜಿಲ್ಲೆಯೂ ಬಿಸಿಲಿನ ತಾಪಕ್ಕಿಂತ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆಗೆ ನಲುಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ ಆಗಿದೆ. ಈ ನಡುವೆ ಸೋಮವಾರ ಕೊರೊನಾ ಜಾಗೃತಿಗೆ ಮೂಡಿಸಲು ಹಾಗೂ ಮಾಹಿತಿ ಕಲೆ ಹಾಕಲು ಮನೆಗೆ ಬಂದ ಆಶಾ ಕಾರ್ಯಕರ್ತೆಗೆ ಯುವಕನೋರ್ವ ಪಾದ ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾನೆ.

ಕಲಬುರಗಿ: ಪ್ರಸ್ತುತ ಕಲಬುರಗಿ ಜಿಲ್ಲೆಯೂ ಬಿಸಿಲಿನ ತಾಪಕ್ಕಿಂತ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆಗೆ ನಲುಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ ಆಗಿದೆ. ಈ ನಡುವೆ ಸೋಮವಾರ ಕೊರೊನಾ ಜಾಗೃತಿಗೆ ಮೂಡಿಸಲು ಹಾಗೂ ಮಾಹಿತಿ ಕಲೆ ಹಾಕಲು ಮನೆಗೆ ಬಂದ ಆಶಾ ಕಾರ್ಯಕರ್ತೆಗೆ ಯುವಕನೋರ್ವ ಪಾದ ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾನೆ.
ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾದ ಆಶಾ ಕಾರ್ಯಕರ್ತೆ ಚಂದ್ರಭಾಗ ಅವರಿಗೆ ವಿಜಯ ಕುಮಾರ್ ಎಂಬ ಯುವಕ ಪಾದಪೂಜೆ ಮಾಡಿ ನಮಸ್ಕರಿಸಿದ್ದಾನೆ.
ಮೊದಲು ಸ್ಯಾನಿಟೈಸರ್ ನಿಂದ ತನ್ನ ಕೈ ತೊಳೆದುಕೊಂಡು ನಂತರ ಯುವಕ ಪಾದ ಪೂಜೆ ಮಾಡಿದ್ದು, ಜನ ಮೆಚ್ಚುಗೆಗೆ ಪಾತ್ರವಾಗಿದೆ.
ಈಗಾಗಲೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಅವಿರತವಾಗಿ ಕೊರೊನಾ ರಕ್ಷಕರಾಗಿ ಹೋರಾಡುತ್ತಿದ್ದಾರೆ.
ಕಲಬುರಗಿ ಜಿಲ್ಲೆ ಸೇರಿದಂತೆ ಶಹಾಬಾದ್ ಪಟ್ಟಣ, ಚಿತ್ತಾಪುರ ತಾಲೂಕಿನ ವಾಡಿ ಹಾಗೂ ಆಳಂದ ತಾಲೂಕಿನಲ್ಲಿಯೂ ಕೊರೊನಾ ಹೊಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


