ರೆಡ್ ಜೋನ್ ಹೊರತುಪಡಿಸಿ ಹೆದ್ದಾರಿ ಕಾಮಗಾರಿಗಳ ಅನುಷ್ಠಾನ: ಗೋವಿಂದ ಎಂ ಕಾರಜೋಳ
ಕೊರೊನಾ ನಿಯಂತ್ರಣಕ್ಕೆ ಪೂರಕ ನಿರ್ದೇಶನಗಳನ್ನು ಅನುಸರಿಸಿ ರೆಡ್ ಜೋನ್ ಹೊರತು ಪಡಿಸಿ ಉಳಿದ ವಲಯಗಳಲ್ಲಿ ಕೇಂದ್ರ ಸರ್ಕಾರವು ಮಂಜೂರು ಮಾಡಿದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿ ಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಪೂರಕ ನಿರ್ದೇಶನಗಳನ್ನು ಅನುಸರಿಸಿ ರೆಡ್ ಜೋನ್ ಹೊರತು ಪಡಿಸಿ ಉಳಿದ ವಲಯಗಳಲ್ಲಿ ಕೇಂದ್ರ ಸರ್ಕಾರವು ಮಂಜೂರು ಮಾಡಿದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿ ಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.
ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಎಲ್ಲಾ ರಾಜ್ಯಗಳ ಲೋಕೋಪಯೋಗಿ ಹಾಗೂ ಸಾರಿಗೆ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದ ದಲ್ಲಿ ಮಾತನಾಡಿದ ಡಿಸಿಎಂ, ನೀರು ಸಂಗ್ರಹಕ್ಕೆ ಅನುಕೂಲವಾಗುವಂತೆ ಮಹಾರಾಷ್ಟ್ರ ದ ಮಾದರಿಯ ಬ್ರಿಡ್ಜ್ ಕೆಳಭಾಗದಲ್ಲಿ ವಿಯರ್ ನಿರ್ಮಾಣ ಕಾಮಗಾರಿಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ 8100 ಕೋಟಿ ವೆಚ್ಚದ 2020-21 ನೇ ಸಾಲಿನ ಪ್ರಸ್ತಾವನೆಗಳನ್ನು ಶೀಘ್ರವಾಗಿ ಮಂಜೂರು ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದರು.
ಕೊರೊನಾ ವೈರಸ್ ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನಗಳನ್ನು ಅಳವಡಿಸಿಕೊಂಡು, ರಸ್ತೆ ನಿರ್ಮಾಣ ಕಾಮಗಾರಿಗಳು,ಕಟ್ಟಡ ಕಾರ್ಮಿಕರು, ಸಿಬ್ಬಂದಿ ವರ್ಗದವರು , ವಾಹನ ಚಾಲಕರು, ಸಹಾಯಕರು ಮಾಸ್ಕ್ ,ಸ್ಯಾನಿಟೈಜರ್ ಗಳನ್ನು ಉಪಯೋಗಿಸುವಂತೆ ಕ್ರಮಕೈಗೊಳ್ಳಲಾಗಿದೆ. ಕಾಮಗಾರಿ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮಕೈಗೊಳ್ಳಲಾಗಿದೆ.
ಸರಕು ಸಾಗಾಣಿಕೆ, ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಾಗಾಣಿಕೆ ವಾಹನಗಳಿಗೆ ಮುಕ್ತವಾಗಿ ಸಂಚರಿಸುವಂತೆ ಕ್ರಮಕೈಗೊಳ್ಳಲಾಗಿದೆ. ರೈತರಿಗೆ, ಕೃಷಿ ಕಾರ್ಮಿಕರಿಗೆ ಯಾವುದೇ ಅಡತಡೆ ಮಾಡದಂತೆ ಪೂರಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಶಕ್ತಿ ಮೀರಿ ಶ್ರಮಿಸುತ್ತಿದೆ ಎಂದು ಡಿಸಿಎಂ ವಿವರಿಸಿದರು. ಉಪಮುಖ್ಯಮಂತ್ರಿಯವರಾದ ಶ್ರೀ ಲಕ್ಷ್ಮಣ ಸವದಿ ಸಾರಿಗೆ ಸಂಸ್ಥೆಗಳ ಸ್ಥಿತಿಗತಿ ಸಂಚಾರ ವ್ಯವಸ್ಥೆ ಯ ಕುರಿತು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


