ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಗುಡುಗು ಸಹಿತ ಭಾರೀ ಮಳೆ
ಸಿಲಿಕಾನ್ ಸಿಟಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಬಹುತೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಬಹುತೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಬೆಳಗ್ಗೆ 5.30ರ ಸುಮಾರಿಗೆ ಆರಂಭವಾದ ಮಳೆ ಬಿಡದೇ ಸುರಿದಿದೆ. ಮೈಸೂರು ರಸ್ತೆ, ಕೆಂಗೇರಿ, ಉತ್ತರಹಳ್ಳಿ, ವಿಜಯನಗರ, ಜಯನಗರ, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.
ಈ ನಡುವೆ ಮೇ.1ರವರೆಗೂ ರಾಜ್ಯದಲ್ಲಿ ಇದೇ ರೀತಿ ಮಳೆ ಮುಂದುವರೆಯಲಿಗೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ ಕೂಡ ರಾಮನಗರ, ಹೆಚ್'ಡಿಕೋಟೆಯಲ್ಲಿ ಮಳೆಯಾಗಿತ್ತು. ದಕ್ಷಿಣ ಒಳನಾಡಿನಲ್ಲಿಯೂ ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಉತ್ತರ ಒಳನಾಡು, ಕರಾವಳಿ ಪ್ರದೇಶಗಳಲ್ಲಿ ತಾಪಮಾನ ಮುಂದುರೆಯಲಿದೆ.
ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದೆ. ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


