ರಾಜ್ಯ

ಉಡುಪಿ: ನದಿಯಲ್ಲಿ ಬಳಸಿದ ಪಿಪಿಇ ಪತ್ತೆ, ಪ್ರಕರಣ ದಾಖಲು

ಕೋವಿಡ್ -೧೯ ರೋಗಿಗಳ ಚಿಕಿತ್ಸೆ ವೇಳೆ ವೈದ್ಯರು ಧರಿಸುವ ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ)ವಾಗಿರುವ ರಕ್ಷಾ ಕವಚವೊಂದು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಗಳ ಬಳಿಯ ನದಿಯಲ್ಲಿ ಕಂಡುಬಂದಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಉಡುಪಿ: ನದಿಯಲ್ಲಿ ಬಳಸಿದ ಪಿಪಿಇ ಪತ್ತೆ, ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Published On :

ಉಡುಪಿ: ಕೋವಿಡ್ -೧೯ ರೋಗಿಗಳ ಚಿಕಿತ್ಸೆ ವೇಳೆ ವೈದ್ಯರು ಧರಿಸುವ ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ)ವಾಗಿರುವ ರಕ್ಷಾ ಕವಚವೊಂದು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಗಳ ಬಳಿಯ ನದಿಯಲ್ಲಿ ಕಂಡುಬಂದಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. 

ನದಿಯಲ್ಲಿ ಎಸೆಯಲಾಗಿರುವ ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ) ಬಗ್ಗೆ ಪಂಚಾಯಿತಿ ಕಚೇರಿಯ ಸಿಬ್ಬಂದಿ ಮಂಗಳವಾರ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದು, ನಂತರ ಈ ಸಂಬಂಧ ಪೊಲೀಸರಿಗೂ ದೂರು ಸಲ್ಲಿಸಲಾಗಿದೆ.

ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ) ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆ ವೇಳೆ ವೈದ್ಯರು ಮಾತ್ರ ಬಳಸುವ ರಕ್ಷಾ ಕವಚವಾಗಿದೆ. ಈ ರಕ್ಷಾ ಕವಚ ಯಾವ ಆಸ್ಪತ್ರೆಯ ವೈದ್ಯರು ಬಳಸಿದ್ದು, ಅದನ್ನು ಯಾವ ಉದ್ದೇಶಕ್ಕಾಗಿ ನದಿಗೆ ಎಸೆಯಲಾಗಿದೆ ಎಂಬುದರ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಬೇಕಿದೆ.

ಈ ಕುರಿತು ಮಾತನಾಡಿರುವ ಕೊರೊನಾ ವೈರಸ್ ನೋಡಲ್ ಅಧಿಕಾರಿ ಪ್ರಶಾಂತ್ ಭಟ್, ಪೊಲೀಸ್ ತನಿಖೆಯ ನಂತರ ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ) ವನ್ನು ಜೈವಿಕ ರಸಾಯನಿಕ ನಿರ್ವಹಣಾ ವಿಧಾನದಲ್ಲಿ ನಾಶಗೊಳಿಸಬೇಕಿದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.