ಮೇ 5ಕ್ಕೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ: ಶಿಕ್ಷಣ ಇಲಾಖೆ
ಈಗಾಗಲೇ ಪರೀಕ್ಷೆ ಪೂರ್ಣಗೊಂಡಿರುವ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಮೇ 5ರಂದು ಪ್ರಕಟಿಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು: ಈಗಾಗಲೇ ಪರೀಕ್ಷೆ ಪೂರ್ಣಗೊಂಡಿರುವ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಮೇ 5ರಂದು ಪ್ರಕಟಿಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದೆ.
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಫಲಿತಾಂಶವನ್ನು ಪ್ರಕಟಿಸಲು ಇಲಾಖೆ ಮುಂದಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು ಮಟ್ಟದಲ್ಲಿಯೇ ನಿರ್ವಹಿಸಲು ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆ ಸ್ಪಷ್ಟಪಡಿಸಿದೆ.
ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭದಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದು, ಇಚ್ಛಿಸುವ ಪೋಷಕರಿಂದ ಕಂತುಗಳ ಮೂಲಕ ಸ್ವೀಕರಿಸತಕ್ಕದ್ದು ಹಾಗೂ 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿದೆ.
ಒಂದು ವೇಳೆ ಈ ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ನಿರ್ದಾಕ್ಷಿಣ್ಯವಾದ ಕ್ರಮಕ್ಕೆ ಮುಂದಾಗಲಾಗುವುದೆಂದು ಪದವಿಪೂರ್ವ ಶಿಕ್ಷಣ ನಿರ್ದೇಶಕರು ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


