ರಾಜ್ಯ

ಕಾರ್ಮಿಕ ವ್ಯಾಜ್ಯಗಳ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಕೈಗಾರಿಕಾ ವ್ಯಾಜ್ಯ ಗಳ ಕಾಯ್ದೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ. ಈ ಕಾಯ್ದೆ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನ ಕೈಗೊಂಡಿತ್ತು.

ಕಾರ್ಮಿಕ ವ್ಯಾಜ್ಯಗಳ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ
ವಜುಬಾಯಿ ವಾಲಾ
Published On :

ಬೆಂಗಳೂರು: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಕೈಗಾರಿಕಾ ವ್ಯಾಜ್ಯ ಗಳ ಕಾಯ್ದೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ. ಈ ಕಾಯ್ದೆ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನ ಕೈಗೊಂಡಿತ್ತು.

ರಾಜ್ಯದಲ್ಲಿ ಕಾರ್ಮಿಕರು ಮತ್ತು ಕಾರ್ಖಾನೆ ಮಾಲಿಕರ ನಡುವಿನ ವ್ಯಾಜ್ಯಗಳನ್ನು ಕಡಿಮೆ ಮಾಡಿ ಸುಗಮ ಆಡಳಿತ ನಡೆಸಲು ಅನುಕೂಲವಾಗುಂತೆ ಕೈಗಾರಿಕೆಗಳ ವಿವಾದಗಳ ಅಧಿನಿಯಮ 1947, ಕಾರ್ಖಾನೆಗಳ ಅಧಿನಿಯಮ 1948, ಗುತ್ತಿಗೆ ಕಾರ್ಮಿಕರ ಅಧಿನಿಯಮ 1970 ಕ್ಕೆ ತಿದ್ದುಪಡಿ ಮಾಡಿ ಸುಗ್ರೀ ವಾಜ್ಞೆ ಹೊರಡಿಸಲಾಗಿದೆ.

ಕಾರ್ಮಿಕ ಸಂಘಟನೆಗಳು, ವಿರೋಧ ಪಕ್ಷಗಳ ತೀವ್ರ ವಿರೋಧದ ಮಧ್ಯೆಯೂ ರಾಜ್ಯ ಸರ್ಕಾರ ಹೊರಡಿಸಿದ್ದ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ ತಿದ್ದುಪಡಿ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಕಿತ ಹಾಕಿದ್ದಾರೆ. 

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನಷ್ಟ ಅನುಭವಿಸುತ್ತಿದ್ದ ಕಾರ್ಖಾನೆ ಮಾಲಿಕರು ಉತ್ತರ ಪ್ರದೇಶದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಕಾಯ್ದೆಗೆ ತಿದ್ದುಪಡಿ ತರುವಂತೆ ಮನವಿ ಮಾಡಿದ್ದರು. ಕೇಂದ್ರ ಸರ್ಕಾರ ಕೂಡ ಕಾರ್ಮಿಕ ಖಾಯ್ದೆಗೆ ತಿದ್ದುಪಡಿ ತರುವಂತೆ ಸೂಚಿಸಿತ್ತು. ಅದರಂತೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ಮಾಡಿದೆ. ಹೊಸ ತಿದ್ದುಪಡಿ ಕಾಯ್ದೆ ಪ್ರಕಾರ ವಿದ್ಯುತ್ ಸೌಲಭ್ಯದ ಜತೆಗೆ ಕನಿಷ್ಠ 10 ಕಾರ್ಮಿಕರಿರುವ ಕಾರ್ಖಾನೆಯ ಬದಲು 20 ಕಾರ್ಮಿಕರಿರುವುದನ್ನು ಕಾರ್ಖಾನೆ ವ್ಯಾಪ್ತಿಯಿಂದ ಹೊರಗಿಡಲಾಗಿದೆ. 

ಸದ್ಯ ಇರುವ ಕಾಯ್ದೆ ಪ್ರಕಾರ ನೂರಕ್ಕೂ ಹೆಚ್ಚು ಕಾರ್ಮಿಕರಿರುವ ಕಾರ್ಖಾನೆ ಮುಚ್ಚುವುದಾದರೆ ಸರ್ಕಾರದ ಅನುಮತಿ ಪಡೆಯಬೇಕು. ಈ ಮಿತಿಯನ್ನು ನೂರರಿಂದ 300ಕ್ಕೆ ಹೆಚ್ಚಳ ಮಾಡಲಾಗಿದೆ. ಇನ್ನು ಹೆಚ್ಚುವರಿ ಕೆಲಸದ ಅವಧಿಯನ್ನು 75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲು ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಇದರೊಂದಿಗೆ ಟೌನ್ ಆ್ಯಂಡ್ ಕಂಟ್ರಿ ಪ್ಲ್ಯಾನಿಂಗ್ ಕಾಯ್ದೆಗೂ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲಾಗಿದ್ದು ಕಾಯ್ದೆಗೆ 18 ಬಿ ಯನ್ನು ಹೊಸದಾಗಿ ಸೇರಿಸಲಾಗಿದ್ದು, ಮೆಟ್ರೊ ಮಾರ್ಗದ ಎರಡೂ ಬದಿಗೆ ಫ್ರಿಮಿಯಂ ಎಫ್.ಎ ಆರ್ ದರವನ್ನು ನಿಗದಿ ಪಡಿಸಲು ತಿದ್ದುಪಡಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಈ ರೀತಿಯ ಮಾದರಿ ಮುಂಬೈನಲ್ಲಿದೆ. ಅದೆ ಮಾದರಿಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ  ಕಾನೂನು ತಿದ್ದುಪಡಿ ಮಾಡಿದ್ದು, ಈ ಕಾಯ್ದೆಗೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.