ರಾಜ್ಯ

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ

ನಗರದ ನೂತನ ಪೊಲೀಸ್‌ ಕಮಿಷನರ್‌ ಆಗಿ ಗುಪ್ತಚರ ವಿಭಾಗದ ಎಡಿಜಿಪಿ ಕಮಲ್ ಪಂತ್‌ ಅವರು ಶನಿವಾರ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ
ಕಮಲ್ ಪಂತ್ ಅಧಿಕಾರ ಸ್ವೀಕಾರ
Published On :

ಬೆಂಗಳೂರು: ನಗರದ ನೂತನ ಪೊಲೀಸ್‌ ಕಮಿಷನರ್‌ ಆಗಿ ಗುಪ್ತಚರ ವಿಭಾಗದ ಎಡಿಜಿಪಿ ಕಮಲ್ ಪಂತ್‌ ಅವರು ಶನಿವಾರ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

ಶುಕ್ರವಾರ ಸಂಜೆಯೇ ನೂತನ ಕಮಿಷನರ್‌ ಅಧಿಕಾರ ಸ್ವೀಕರಿಸುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ಕಮಿಷನರ್‌ ಕಚೇರಿಯಲ್ಲಿ ಸಕಲ ಸಿದ್ಧತೆಗಳೂ ನಡೆದಿದ್ದವು. ಆದರೆ ಕೊನೇ ಗಳಿಗೆಯಲ್ಲಿ ಅಧಿಕಾರ ಹಸ್ತಾಂತರ ಶನಿವಾರಕ್ಕೆ ಮುಂದೂಡಲ್ಪಟ್ಟಿತು.

ಇಂದು ಬೆಳಗ್ಗೆ 11 ಗಂಟೆಗೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು, ಭಾಸ್ಕರ್ ರಾವ್ ಅವರು ಕಮಲ್ ಪಂಥ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಭಾಸ್ಕರ್‌ ರಾವ್‌ ಮತ್ತು ಕಮಲ್ ಪಂತ್‌ ಒಂದೇ ಬ್ಯಾಚಿನ ಅಧಿಕಾರಿಗಳಾಗಿರುವುದು ಮಾತ್ರವಲ್ಲದೆ ಇಬ್ಬರೂ ಆಪ್ತ ಸ್ನೇಹಿತರಾಗಿದ್ದಾರೆ. ಬೆಂಗಳೂರು ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ  ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕನ್ನಾಗಿ ಮಾಡಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.