ರಾಜ್ಯ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆಗಸ್ಟ್ 15 ರೊಳಗೆ ಪ್ರಾರಂಭಿಸಿ: ಸುರೇಶ್ ಕುಮಾರ್

ಬಹು ನಿರೀಕ್ಷಿತ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ಆಗಸ್ಟ್ 15 ರೊಳಗೆ ಪ್ರಾರಂಭಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆಗಸ್ಟ್ 15 ರೊಳಗೆ ಪ್ರಾರಂಭಿಸಿ: ಸುರೇಶ್ ಕುಮಾರ್
ಎಸ್. ಸುರೇಶ್ ಕುಮಾರ್
Published On :

ಬೆಂಗಳೂರು: ಬಹು ನಿರೀಕ್ಷಿತ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ಆಗಸ್ಟ್ 15 ರೊಳಗೆ ಪ್ರಾರಂಭಿಸುವಂತೆ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಶುಕ್ರವಾರ ಚರ್ಚೆ ನಡೆಸಿದ ಬಳಿಕ ಶಿಕ್ಷಕ ಸಮುದಾಯವು ಬಹುದಿನಗಳಿಂದ ವರ್ಗಾವಣೆ ಪ್ರಕ್ರಿಯೆಗೆ ಚಾಲನೆಯನ್ನು ನಿರೀಕ್ಷಿಸುತ್ತಿದೆ.ಆದಕಾರಣ, ಎಲ್ಲ ತಾಂತ್ರಿಕ ಸಿದ್ಧತೆಗಳನ್ನು ಕೂಡಲೇ ಪೂರ್ಣಗೊಳಿಸಿಕೊಂಡು ವರ್ಗಾವಣೆ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಬೇಕೆಂದು ಸಚಿವರು ಸೂಚಿಸಿದ್ದಾರೆ.

ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆಯ ಶಿಕ್ಷೆಗೆ ಒಳಗಾಗಿದ್ದ ಶಿಕ್ಷಕ ಸಮುದಾಯಕ್ಕೆ ಈ ಸಾಲಿನ ವರ್ಗಾವಣಾ ಪ್ರಕ್ರಿಯೆಯಲ್ಲಿ ಮೊದಲ ಆದ್ಯತೆಯ ವರ್ಗಾವಣೆಯನ್ನು ನೀಡಿ ಅನುಕೂಲ ಮಾಡಿಕೊಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು ಶೀಘ್ರ ವರ್ಗಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.