ಮಂಡ್ಯ: ದೇವರ ಗರ್ಭಗುಡಿಯಲ್ಲೇ ಪೂಜಾರಿ ಸಾವು
ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಗರ್ಭಗುಡಿಯಲ್ಲೇ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ.

ಮಂಡ್ಯ: ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಗರ್ಭಗುಡಿಯಲ್ಲೇ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ.
ಮಲ್ಲೇಶ್ವರಸ್ವಾಮಿ ದೇವಸ್ಥಾನದ ಪೂಜಾರಿ ಚಂದ್ರಶೇಖರ್(45) ಮೃತಪಟ್ಟವರಾಗಿದ್ದಾರೆ.
ಮೂಲಯಃ ಸಂತೇ ಕಸಲಗೆರೆಯ ನಿವಾಸಿಯಾದ ಚಂದ್ರಶೇಖರ್ ಹಲವು ವರ್ಷಗಳಿಂದ ಮಂಗಲ ಗ್ರಾಮದಲ್ಲಿನ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದು ದೇವರ ಸೇವಾಕಾಯಕ ಮಾಡುತ್ತಿದ್ದರು, ವರಮಹಾಲಕ್ಷ್ಮಿ ಹಬ್ಬದ ದಿನವಾದ ಶುಕ್ರವಾರ ಮಧ್ಯಾಹ್ನ ದೇವಾಯದಲ್ಲಿ ಮಲ್ಲೇಶ್ವರಸ್ವಾಮಿಗೆ ಪೂಜೆ ಮಾಡುತ್ತಿದ್ದರು, ಈ ವೇಳೆ, ಗರ್ಭಗುಡಿಯಲ್ಲೇ ಎದೆ ನೋವು ಕಾಣಿಸಿಕೊಂಡು ಬಿದ್ದಿದ್ದಾರೆ. ಇದನ್ನು ಕಂಡ ಸ್ಥಳಿಯ ಭಕ್ತರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.
ಮೃತ ಚಂದ್ರು ಅವರಿಗೆ ಪತ್ನಿ ಹಾಗೂ ಐವರು ಸೋದರಿಯರು ಇದ್ದಾರೆ. ಸುಮಾರು 12 ವರ್ಷದ ಹಿಂದೆ ಮದುವೆಯಾಗಿದ್ದ ಚಂದ್ರಶೇಖರ್‌ಗೆ ಮಕ್ಕಳಾಗಿರಲಿಲ್ಲ. ಇದೇ ಕೊರಗಿನಲ್ಲಿದ್ದ ದಂಪತಿಯು ಮಗುವೊಂದನ್ನು ದತ್ತು ತೆಗೆದುಕೊಳ್ಳುವ ಆಲೋಚನೆಯಲ್ಲಿದ್ದರು. ಆದರೆ, ಆ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಚಂದ್ರು ಸಾವನ್ನಪ್ಪಿದ್ದಾರೆ.
ವರದಿ ನಾಗಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


