ಸಿಎಂ ಯಡಿಯೂರಪ್ಪಗೆ ಕೊರೋನಾ ಪಾಸಿಟೀವ್: ಆಸ್ಪತ್ರೆಗೆ ದಾಖಲು!
ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಗೆ ಕೊರೋನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಗೆ ಕೊರೋನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.
ಖುದ್ದು ಸಿಎಂ ಯಡಿಯೂರಪ್ಪ ಈ ಬಗ್ಗೆ ಟ್ವೀಟ್ ಮಾಡಿದ್ದು, ತಮಗೂ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
"ನನಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಆರೋಗ್ಯವಾಗಿದ್ದೇನೆ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ, ನನ್ನೊಂದಿಗೆ ಇತ್ತೀಚಿನ ದಿನಗಳಲ್ಲಿ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಗೆ ಒಳಪಟ್ಟು ಆರೋಗ್ಯದ ಮೇಲೆ ನಿಗಾ ವಹಿಸಬೇಕು" ಎಂದು ಸಿಎಂ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದಾರೆ
Related Article
ಕೊನೆಗೂ ಬಂತು ಥರ್ಡ್ ಅಂಪೈರ್ ರಿಸಲ್ಟ್: ಸಿಟಿ ರವಿಗೆ ಕೊರೋನಾ ಪಾಸಿಟಿವ್
ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ ಕೊರೋನಾ ಪಾಸಿಟಿವ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


