ಬೆಂಗಳೂರು: ಬರೋಡಾ ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
ಬ್ಯಾಂಕ್ ಲಾಕರ್ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವುದಾಗಿ ಜಯನಗರಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು: ಬ್ಯಾಂಕ್ ಲಾಕರ್ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವುದಾಗಿ ಜಯನಗರ
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಯನಗರ ಬ್ರ್ಯಾಂಚ್ ಬ್ಯಾಂಕ್ ಆಫ್ ಬರೋಡದ ಲಾಕರ್ನಲ್ಲಿಟ್ಟಿದ್ದ ತಮ್ಮ ಚಿನ್ನಾಭರಣ ಕಳವು ಮಾಡಲಾಗಿದೆ ಎಂದು
ಆರೋಪಿಸಿ ಜೆಪಿ ನಗರದ ಶಿವ ಪ್ರಸಾದ್ (52) ಎಂಬುವವರು ದೂರು ದಾಖಲಿಸಿದ್ದಾರೆ.
ಶಿವಪ್ರಸಾದ್ ಅವರು ತಮ್ಮ ಬ್ಯಾಂಕ್ ಲಾಕರ್ನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ 1.73 ಕೆಜಿ ಚಿನ್ನಾಭರಣ ಇಟ್ಟಿದ್ದರು. ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಾದ ಪರಿಣಾಮ ಅವರು ಬ್ಯಾಂಕಿನತ್ತ ಸುಳಿದಿರಲಿಲ್ಲ. ಜು. 22 ರಂದು ಬ್ಯಾಂಕ್ ಲಾಕರ್ ಓಪನ್ ಮಾಡಿದಾಗ 50 ಗ್ರಾಂ ಪೀಕಾಕ್ ಚೈನ್, 45 ಗ್ರಾಂ ಒಂದು ರೌಂಡ್ ಬಾಲ್ ಬೈನ್, 1200 ಗ್ರಾಂ ಗಟ್ಟಿ ಚಿನ್ನ ಸೇರಿ 1.73 ಕೆಜಿ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಗಾಬರಿಗೊಂಡ ಶಿವಪ್ರಸಾದ್ ಅವರು ಬ್ಯಾಂಕ್ ಸಿಬ್ಬಂದಿ ಕಳವು ಮಾಡಿದ್ದಾರೋ ಅಥವಾ ಬ್ಯಾಂಕಿಗೆ ಬಂದಿದ್ದ ಯಾರಾದರೂ
ಕಳವು ಮಾಡಿದ್ದಾರೋ ಎಂಬುದನ್ನು ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


