ಅಮಿತ್ ಶಾ ವಿರುದ್ಧ ಅವಹೇಳನಕಾರಿ ಪೋಸ್ಟ್: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಂಧನ
ಕೊರೋನಾ ಸೋಂಕಿಗೆ ತುತ್ತಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ, ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ್ ಪ್ರಸಾದ್ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿಗೆ ತುತ್ತಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ, ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ್ ಪ್ರಸಾದ್ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆನಂದ್ ಅವರು ಅಮಿತ್ ಶಾ ವಿರುದ್ಧ ಅವಹೇಳನಕಾರಿಯಾಗಿ ಬರೆದಿದ್ದಾರೆ ಎಂದು ಆರೋಪಿಸಲಾಗಿತ್ತು. ತಕ್ಷಣ ಕಳೆದ ರಾತ್ರಿಯೇ
ಪೊಲೀಸರು ಅವರ ಮನೆಗೆ ಆಗಮಿಸಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153(ಎ) ಕಲಂನಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು
ಪೊಲೀಸ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


