ರಾಜ್ಯದಲ್ಲಿ ಮರಣ ದರ ಮಹಾರಾಷ್ಟ್ರ, ದೆಹಲಿಗಿಂತ ಕಡಿಮೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಮರಣ ದರ ಕಡಿಮೆಯಾಗಿದೆ.

ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಮರಣ ದರ ಕಡಿಮೆಯಾಗಿದೆ.
ಇದು ಸಮಾಧಾನಕರ ವಿಚಾರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. "ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಇತರೆ ರಾಜ್ಯಗಳಿಗಿಂತ ಸಮಾಧಾನಕರವಾಗಿದೆ. ಪ್ರತಿ 10 ಲಕ್ಷ ಜನಸಂಖ್ಯೆಗೆ ಕೋವಿಡ್ ನಿಂದ ಮರಣ ಹೊಂದುತ್ತಿರುವವವರ ಸಂಖ್ಯೆ ಕರ್ನಾಟಕಕ್ಕಿಂತ ದೆಹಲಿಯಲ್ಲಿ 5 ಪಟ್ಟು ಮತ್ತು ಮಹಾರಾಷ್ಟ್ರದಲ್ಲಿ 3 ಪಟ್ಟು ಹೆಚ್ಚಿದೆ.
ಬೆಂಗಳೂರಿನಲ್ಲಿ ಮರಣ ಪ್ರಮಾಣವು ಇತರೆ ಮಹಾನಗರಗಳಿಗಿಂತ ಕಡಿಮೆ ಇದೆ," ಎಂದು ಅವರು ತಿಳಿಸಿದ್ದಾರೆ. 10 ಲಕ್ಷ ಜನಸಂಖ್ಯೆಗೆ ರಾಜ್ಯದಲ್ಲಿ 39 ಮತ್ತು ಬೆಂಗಳೂರಿನಲ್ಲಿ 115 ಕೋವಿಡ್ ಮರಣ ದರವಿದೆ.
ಅಧಿಕಾರಿಗಳಿಗೆ ಎಚ್ಚರಿಕೆ
ಆಸ್ಪತ್ರೆಗಳಲ್ಲಿ ರೋಗಿಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಲು ವಿಳಂಬ ಮಾಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
"ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೃತದೇಹ ತೆರವುಗೊಳಿಸಲು ವಿಳಂಬ ಮಾಡಿರುವ ಘಟನೆ ನನ್ನ ಗಮನಕ್ಕೆ ಬಂದಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ರೀತಿ ನಿರ್ಲಕ್ಷ್ಯ ತೋರುವ ವೈದ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು", ಎಂದು ಅವರು ಎಚ್ಚರಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


