ವಿಸಾ ನಿಯಮ ಉಲ್ಲಂಘನೆ: ಸಿಸಿಬಿ ಪೊಲೀಸರಿಂದ 20 ವಿದೇಶಿ ಪ್ರಜೆಗಳ ಬಂಧನ
ವಿಸಾ ನಿಯಮ ಉಲ್ಲಂಘನೆ ಮಾಡಿ ನಗರದಲ್ಲಿ ನೆಲೆಸಿದ್ದ 20 ಮಂದಿ ವಿದೇಶಿ ಪ್ರಜೆಗಳನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ಪಾಸ್‌ಪೋರ್ಟ್ ಇಲ್ಲದೆ ಅಕ್ರಮವಾಗಿ ತಂಗಿದ್ದ 20 ಆಫ್ರಿಕನ್ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಕಲಿ ಕರೆನ್ಸಿ, ಮಾದಕವಸ್ತು ಮಾರಾಟ ಮತ್ತು ಇತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 3 ಆಫ್ರಿಕಾ ಪ್ರಜೆಗಳು ಬಂಧಿತರಲ್ಲಿ ಸೇರಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಹೆಣ್ಣೂರು, ಬಾಗಲೂರು, ಕೊತ್ತನೂರು, ಸಂಪಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಳಿದುಕೊಂಡಿರುವ ಆಫ್ರಿಕಾ ಪ್ರಜೆಗಳು ಗಲಾಟೆ ಮತ್ತು ತೊಂದರೆ ಕೊಡುತ್ತಿರುವುದರ ಕುರಿತ ದೂರುಗಳ ಹಿನ್ನೆಲೆಯಲ್ಲಿ ನಗರ ಪೊಲೀಸ್ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಸಿಸಿಬಿ ತಂಡ 34 ತಾಸಿನ ಕಾರ್ಯಾಚರಣೆಯಲ್ಲಿ 80 ಆಫ್ರಿಕಾ ಪ್ರಜೆಗಳನ್ನು ವಶಕ್ಕೆ ಪಡೆದಿದೆ.
ಬಂಧಿತರಲ್ಲಿ ಕೆಲವರು ವೀಸಾ ಅವಧಿ ಮುಗಿದ ನಂತರವೂ ನಗರದಲ್ಲಿ ಉಳಿದುಕೊಂಡಿದ್ದು, ಇವರಲ್ಲಿ ಕೆಲವರು ಪಾಸ್‌ಪೋರ್ಟ್ ಹೊಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಿವಿಧ ಕಾಯ್ದೆಗಳಡಿ ಪೊಲೀಸರು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


