ರಾಜ್ಯ

ದೇಶದ ಪ್ರಥಮ ಐಸಿಎಂಆರ್ ಅನುಮೋದಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಸಚಿವ ಡಾ.ಕೆ.ಸುಧಾಕರ್ ಚಾಲನೆ

ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಐಐಎಸ್ ಕ್ಯಾಂಪಸ್ ನಲ್ಲಿ ಚಾಲನೆ ನೀಡಿದರು.

ದೇಶದ ಪ್ರಥಮ ಐಸಿಎಂಆರ್ ಅನುಮೋದಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಸಚಿವ ಡಾ.ಕೆ.ಸುಧಾಕರ್ ಚಾಲನೆ
ಸಚಿವ ಡಾ.ಕೆ.ಸುಧಾಕರ್
Published On :

ಬೆಂಗಳೂರು: ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಐಐಎಸ್ ಕ್ಯಾಂಪಸ್ ನಲ್ಲಿ ಚಾಲನೆ ನೀಡಿದರು.

ಬೆಂಗಳೂರಿನ ಪ್ರತಿಷ್ಠಿತ ಐಐಎಸ್ ಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ  ಈ ಪರೀಕ್ಷಾ ಲ್ಯಾಬ್ ನ್ನು ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಸ್ತಾಂತರಿಸಲಾಯಿತು.

ಇದು ಬಯೋ ಸುರಕ್ಷತೆ ಪ್ರಮಾಣೀಕರಣ ಹೊಂದಿರುವ ಅತ್ಯಂತ ಸುಸಜ್ಜಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಆಗಿದ್ದು ಕೇವಲ 4 ಗಂಟೆಗಳಲ್ಲಿ ಟೆಸ್ಟ್ ವರದಿ ಪಡೆಯಬಹುದಾಗಿದೆ. ದಿನಕ್ಕೆ ಸುಮಾರು 400 ಟೆಸ್ಟ್ ನಡೆಸುವ ಸಾಮರ್ಥ್ಯ ಹೊಂದಿರುವ ಈ ಲ್ಯಾಬ್ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಟೆಸ್ಟ್ ನಡೆಸಲು ಬಳಸಬಹುದಾಗಿದೆ. 

ಐಐಎಸ್ ಸಿ ನಿರ್ದೇಶಕರು, ರಾಜೀವ್ ಗಾಂಧಿ ವಿವಿ ಉಪಕುಲಪತಿಗಳಾದ ಡಾ.ಸಚ್ಚಿದಾನಂದ ಅವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.