ರಾಜ್ಯ

ದೇಶದ ಪ್ರಥಮ ಐಸಿಎಂಆರ್ ಅನುಮೋದಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಡಾ. ಸುಧಾಕರ್ ಚಾಲನೆ

ಬೆಂಗಳೂರಿನ ಪ್ರತಿಷ್ಠಿತ ಐಐಎಸ್ ಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಐಐಎಸ್ ಕ್ಯಾಂಪಸ್ ನಲ್ಲಿ ಚಾಲನೆ ನೀಡಿದರು.

ದೇಶದ ಪ್ರಥಮ ಐಸಿಎಂಆರ್ ಅನುಮೋದಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಡಾ. ಸುಧಾಕರ್ ಚಾಲನೆ
ಟೆಸ್ಟಿಂಗ್ ಲ್ಯಾಬ್
Published On :

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಐಐಎಸ್ ಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಐಐಎಸ್ ಕ್ಯಾಂಪಸ್ ನಲ್ಲಿ ಚಾಲನೆ ನೀಡಿದರು. 

ಈ ಲ್ಯಾಬ್ ಅನ್ನು ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಸ್ತಾಂತರಿಸಿದರು. ಇದು ಬಯೋ ಸುರಕ್ಷತೆ ಪ್ರಮಾಣೀಕರಣ ಹೊಂದಿರುವ ಅತ್ಯಂತ ಸುಸಜ್ಜಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಆಗಿದ್ದು ಕೇವಲ 4 ಗಂಟೆಗಳಲ್ಲಿ ಪರೀಕ್ಷಾ ವರದಿ ಪಡೆಯಬಹುದಾಗಿದೆ. 

ದಿನಕ್ಕೆ ಸುಮಾರು 400 ಪರೀಕ್ಷೆ ನಡೆಸುವ ಸಾಮರ್ಥ್ಯ ಹೊಂದಿರುವ ಈ ಲ್ಯಾಬ್ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಪರೀಕ್ಷೆ ನಡೆಸಲು ಬಳಸಬಹುದಾಗಿದೆ. ಐಐಎಸ್ ಸಿ ನಿರ್ದೇಶಕರು, ರಾಜೀವ್ ಗಾಂಧಿ ವಿವಿ ಉಪಕುಲಪತಿಗಳಾದ ಡಾ.ಸಚ್ಚಿದಾನಂದ ಅವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.