ಶಾಸಕರಾದ ಜಿಟಿ ದೇವೇಗೌಡ, ಹರೀಶ್ ಪೂಂಜಾಗೂ ವಕ್ಕರಿಸಿದ ಕೊರೋನಾ, ಮನೆಯಲ್ಲೇ ಚಿಕಿತ್ಸೆ!
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಕೊರೋನಾ ಸೋಂಕು ಧೃಡಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಕೊರೋನಾ ಸೋಂಕು ಧೃಡಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, ನಾನು ಕೂಡ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದು, ಅದರಲ್ಲಿ ಪಾಸಿಟಿವ್ ವರದಿ ಬಂದಿದೆ. ತಮಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ ಕಂಡು ಬಂದಿಲ್ಲ ಆದರೂ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ.
ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಮತ್ತು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ. ಜಿ.ಟಿ.ದೇವೇಗೌಡರು ಯಾವುದೇ ಕಾರ್ಯಕ್ರಮ ಪ್ರಮುಖ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿರಲಿಲ್ಲ. ಆದರೆ ಕ್ಷೇತ್ರದಲ್ಲಿ ಕೊರೋನಾ ಸಂಬಂಧಿಸದಂತೆ ಸುತ್ತಾಟ, ಜಿಲ್ಲಾಧಿಕಾರಿಗಳು ನೇತೃತ್ವದ ಸಭೆಗಳಲ್ಲಿ ಅವರು ಭಾಗವಹಿಸಿದ್ದರು.
ಶಾಸಕ ಹರೀಶ್ ಪೂಂಜಾಗೂ ಕೊರೋನಾ! ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೊರೋನಾ ಸೋಂಕು ತಗಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ಬೆಂಗಳೂರಿನಲ್ಲಿ ಹರೀಶ್ ಪೂಂಜಾ ಪ್ರಾಥಮಿಕ ಸಂಪರ್ಕದಲ್ಲಿದ್ದರು. ಇದೀಗ ಸೋಂಕು ಪತ್ತೆಯಾದ ನಂತರ ಶಾಸಕರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


