ಬೆಳಗಾವಿ: ಪಂಡರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ರೈತನ ರಕ್ಷಣೆ
ಮನೆಗೆ ವಾಪಾಸಾಗುವ ವೇಳೆ ಪಂಢರಿ ನದಿ ಪ್ರವಾಹದಲ್ಲಿ ಸಿಲುಕಿದ್ದ 60 ವರ್ಷದ ರೈತನನ್ನು ಪೊಲೀಸರು ನುರಿತ ಈಜುಗಾರರ ಸಹಾಯದಿಂದ ರಕ್ಷಿಸಿದ್ದಾರೆ.

ಬೆಳಗಾವಿ: ಮನೆಗೆ ವಾಪಾಸಾಗುವ ವೇಳೆ ಪಂಢರಿ ನದಿ ಪ್ರವಾಹದಲ್ಲಿ ಸಿಲುಕಿದ್ದ 60 ವರ್ಷದ ರೈತನನ್ನು ಪೊಲೀಸರು ನುರಿತ ಈಜುಗಾರರ ಸಹಾಯದಿಂದ ರಕ್ಷಿಸಿದ್ದಾರೆ.
ಖಾನಾಪುರ ತಾಲೂಕಿನ ಕಾಪೋಳಿ ಗ್ರಾಮದ ವಿಲಾಸ್ ದತ್ತಾತ್ರೇಯ ದೇಸಾಯಿ ಪ್ರವಾಹದಲ್ಲಿ ಸಿಲುಕಿದ್ದ ರೈತ. ತಮ್ಮ ಹೊಲದಿಂದ ವಾಪಾಸಾಗುತ್ತಿದ್ದ ವೇಳೆ ಸಿಂದೋಳಿ ಸಮೀಪ ಪಂಡರಿ ನದಿ ಪ್ರವಾಹದಲ್ಲಿ ಸಿಲುಕಿದ್ದ, ಇದ್ದಕ್ಕಿದ್ದಂತೆ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿತ್ತು.
ನದಿ ದಾಟುತ್ತಿದ್ದ ವೇಳೆ ನದಿಯ ಭಾರೀ ನೀರಿನಿಂದಾಗಿ ಆತ ಕೊಚ್ಚಿಹೋಗುತ್ತಿದ್ದ. ಅದೃಷ್ಟವಶಾತ್ ಆತ ಮರದ ಕೊಂಬೆಯೊಂದನ್ನು ಹಿಡಿದುಕೊಂಡು ನಂತರ ಮರವೇರಿ ತನ್ನನ್ನು ರಕ್ಷಿಸುವಂತೆ ಕೂಗಿಕೊಂಡಿದ್ದ.
ಆತನನ್ನು ನೋಡಿದ ದಾರಿ ಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಮತ್ತು ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಆತನನ್ನು ರಕ್ಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


