ರಾಜ್ಯ

ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿ ನಿಭಾಯಿಸಿ: ಎಚ್.ಡಿ. ಕುಮಾರಸ್ವಾಮಿ

ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿ ನಿಭಾಯಿಸಿ: ಎಚ್.ಡಿ. ಕುಮಾರಸ್ವಾಮಿ
ಎಚ್. ಡಿ. ಕುಮಾರಸ್ವಾಮಿ
Published On :

ಬೆಂಗಳೂರು: ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ.  ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ. ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು.ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಮಾಜಿ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ.

ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ. ಹೀಗಾಗಿ ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ 
ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.