ರಾಜ್ಯದಲ್ಲಿ ಅತಿವೃಷ್ಠಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್.ಡಿ. ದೇವೇಗೌಡ ಒತ್ತಾಯ
ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಮಹಾಮಾರಿ ಕೊರೋನಾ ಒಂದು ಕಡೆ ವ್ಯಾಪಕವಾಗಿ ಹರಡುತ್ತಿದೆ. ಇದರ ಜೊತೆಗೆ ದುರದೃಷ್ಟವಷಾತ್ ರಾಜ್ಯದಲ್ಲಿ ಅತಿವೃಷ್ಟಿಯಿಂದ ಜನತೆ ಕಂಗಾಲು ಪಡುವಂತಾಗಿದೆ. ಇದೆ ಸಮಯದಲ್ಲಿ ಮುಖ್ಯಮಂತ್ರಿಗಳಿಗೆ ಕೊರೋನಾ ಸೋಂಕು ತಗುಲಿದೆ, ಅವರು ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ
ಸಂದರ್ಭ ಬಂದಿದೆ. ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳು ಮುಂಗಾರಿನ ಅಬ್ಬರದ ಭೀತಿಯಿಂದ ನಲುಗಿದೆ. ಆದ್ದರಿಂದ ಮುಖ್ಯಮಂತ್ರಿ ಮತ್ತು ಸಚಿವರು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಅತಿವೃಷ್ಟಿಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ. ಬಹುತೇಕ ರಾಜ್ಯದೆಲ್ಲೆಡೆ ಬೆಳೆಗಳು ಹಾನಿಗೊಳಗಾಗಿದೆ. ಜೊತೆಗೆ ಮನೆ-ಮಠ ಕಳೆದುಕೊಂಡವರಿಗೆ ತಡಮಾಡದೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ ಎಂದು ದೇವೇಗೌಡ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


