ರಾಜ್ಯ

ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆ

ವಾಹದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ಧಾರವಾಡದ ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ 3ನೇ ತರಗತಿ ಬಾಲಕಿ ಶ್ರೀದೇವಿ ತೀವ್ರ ಪ್ರವಾಹಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಳು.

ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆ
ಎಡಚಿತ್ರದಲ್ಲಿ ಬಾಲಕಿ ಶ್ರೀದೇವಿಯ ಸಂಗ್ರಹ ಚಿತ್ರ, ಬಲಚಿತ್ರದಲ್ಲಿ ಪೊಲೀಸರ ಶೋಧನೆ
Published On :

ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ಧಾರವಾಡದ ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ 3ನೇ ತರಗತಿ ಬಾಲಕಿ ಶ್ರೀದೇವಿ ತೀವ್ರ ಪ್ರವಾಹಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಳು.

ಬಾಲಕಿಯ ಮೃತದೇಹ ಪತ್ತೆಗೆ ಎನ್ ಡಿಆರ್ ಎಫ್ ತಂಡ ಆಗಮಿಸಿ ತೀವ್ರ ಹುಡುಕಾಟ ನಡೆಸಿತ್ತು. ಬಾಲಕಿ ತನ್ನ ತಾಯಿಯ ಜೊತೆ ಹೊಲಕ್ಕೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ಊಟದ ಬುತ್ತಿ ‌ಕೊಡಲು ಶ್ರೀದೇವಿ ಮತ್ತವಳ ತಾಯಿ ತೆರಳುತ್ತಿದ್ದರು. ಈ ವೇಳೆ ರಸ್ತೆ ದಾಟುವಾಗ ಕಾಲು ಜಾರಿದೆ. ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ರಭಸಕ್ಕೆ ಬಾಲಕಿ ನೀರಲ್ಲಿ ಕೊಚ್ಚಿ ಹೋಗಿದ್ದಾಳೆ.

ಶ್ರೀದೇವಿ ಗಾಣಿಗೇರ್‌ ಳನ್ನು ಮೇಲೆತ್ತಲು ಸ್ಥಳೀಯ ಯುವಕರು ಪ್ರಯತ್ನಿಸಿದರೂ ಪ್ರಯೋಜನವಾಗಿರಲಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.