ಅಯೋಧ್ಯೆಯಲ್ಲಿ ಕರ್ನಾಟಕಕ್ಕೆ 2 ಎಕರೆ ಜಾಗ ನೀಡಿ: ಉತ್ತರ ಪ್ರದೇಶ ಸಿಎಂಗೆ ಯಡಿಯೂರಪ್ಪ ಪತ್ರ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ

ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ, ಇದೇ ತಿಂಗಳ 5ನೇ ತಾರೀಖು ನಡೆದ ರಾಮಮಂದಿರಕ್ಕೆ ಅಡಿಗಲ್ಲು ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಸಿಎಂ ಬಿಎಸ್ವೈ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.
ಕರ್ನಾಟಕ ರಾಜ್ಯದಿಂದ ಅಯೋಧ್ಯೆಗೆ ಸಾವಿರಾರು ಜನರು ಭೇಟಿ ನೀಡುತ್ತಾರೆ. ಹಾಗಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಸರ್ಕಾರಕ್ಕೆ 2 ಎಕರೆ ಭೂಮಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಿಂದ ಅಯೋಧ್ಯೆಗೆ ಭಕ್ತರು ಭೇಟಿ ನೀಡುತ್ತಾರೆ. ಅವರಿಗಾಗಿ ಯಾತ್ರಿ ನಿವಾಸ ನಿರ್ಮಾಣ ಮಾಡಬೇಕಾಗಿದೆ. ಈ ಉದ್ದೇಶದಿಂದ ಕರ್ನಾಟಕಕ್ಕೆ ಉತ್ತರಪ್ರದೇಶ ಸರ್ಕಾರ ಎರಡು ಎಕರೆ ಜಾಗ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


