ರಾಜ್ಯ

ಹೆದ್ದಾರಿಯಲ್ಲಿ ಕೃತಕ ನೆರೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ತಡೆದು ಸಾರ್ವಜನಿಕರ ಆಕ್ರೋಶ

ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಹೊಳೆಯಂತಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಾರು ತಡೆದು ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರದ ಬಸ್ರೂರು ಬಳಿ ಮೂರುಕೈ ಜಂಕ್ಷನ್ ಬಳಿ ನಡೆದಿದೆ.

ಹೆದ್ದಾರಿಯಲ್ಲಿ ಕೃತಕ ನೆರೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ತಡೆದು ಸಾರ್ವಜನಿಕರ ಆಕ್ರೋಶ
Published On :

ಉಡುಪಿ: ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಹೊಳೆಯಂತಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಾರು ತಡೆದು ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರದ ಬಸ್ರೂರು ಬಳಿ ಮೂರುಕೈ ಜಂಕ್ಷನ್ ಬಳಿ ನಡೆದಿದೆ.

ರಾಷ್ಟ್ರಿಯ ಹೆದ್ದಾರಿ 66 ರ ಬಸ್ರೂರು ಮೂರು ಕೈಯಿಂದ ಟಿಟಿ ರಸ್ತೆ ಕಡೆಗೆ ಸಂಚರಿಸುವ ಮಾರ್ಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಮತ್ತೊಂದೆಡೆ ಕುಂದಾಪುರದಿಂದ ಕಾರ್ಯಕ್ರಮ ಮುಗಿಸಿ ಉಡುಪಿಯತ್ತ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೊರಟಿದ್ದರು. ಇದೇ ವೇಳೆ ಹೆದ್ದಾರಿ ಹೋರಾಟ ಸಮಿತಿ, ರಿಕ್ಷಾ ಚಾಲಕರು, ಸ್ಥಳೀಯ ಅಂಗಡಿ ಮಾಲೀಕರು ಹೆದ್ದಾರಿಯ ಅವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಚಿವರ ಕಾರಿಗೆ ಅಡ್ಡಹಾಕಿದ್ದರು.

ಈ ವೇಳೆ ಸಚಿವರು ಹಾಗೂ ಸ್ಥಳೀಯರ ಮಧ್ಯೆ ವಾಗ್ವಾದ ನಡೆದಿದ್ದು, ಬಳಿಕ ಡಿಸಿ ಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರಿಗೆ ಕರೆ ಮಾಡಿ, ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಘಟನೆಯ ವೇಳೆ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಕಿಶೋರ್‌ ಕುಮಾರ್‌, ರಾಜೇಶ್‌ ಕಾವೇರಿ, ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಶಶಿಧರ ಹೆಮ್ಮಾಡಿ, ಗಣೇಶ್‌ ಮೆಂಡನ್‌, ಹಲವು ರಿಕ್ಷಾ ಚಾಲಕರು, ಅಂಗಡಿ ಮಾಲಿಕರು, ಸಾರ್ವಜನಿಕರು ಸ್ಥಳದಲ್ಲಿದ್ದರು. ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯ ಕಾರಣ ಹೆದ್ದಾರಿಯಲ್ಲಿ ನೀರು ನಿಂತು ಹೊಂಡ – ಗುಂಡಿಗಳು ನಿರ್ಮಾಣ ಆಗಿದ್ದು ವಾಹನ ಸವಾರರು ಪರದಾಡುವಂತಾಗಿದೆ, 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.