ತಲಕಾವೇರಿ ಭೂಕುಸಿತ:ಶೋಧ ಕಾರ್ಯಾಚರಣೆ ಪುನರಾರಂಭ, ಒಂದು ಮೃತದೇಹ ಪತ್ತೆ
ಕೊಡಗಿನ ತಲಕಾವೇರಿ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿರುವ ಐವರ ಶೋಧ ಕಾರ್ಯಾಚರಣೆ ಶನಿವಾರ ಮಧ್ಯಾಹ್ನ ಪುನರಾರಂಭಗೊಂಡಿದ್ದು, ಒಂದು ಮೃತದೇಹವನ್ನು ಮಣ್ಣಿನ ಅವಶೇಷಗಳಿಂದ ಹೊರತೆಗೆಯಲಾಗಿದೆ.

ಮಡಿಕೇರಿ: ಕೊಡಗಿನ ತಲಕಾವೇರಿ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿರುವ ಐವರ ಶೋಧ ಕಾರ್ಯಾಚರಣೆ ಶನಿವಾರ ಮಧ್ಯಾಹ್ನ ಪುನರಾರಂಭಗೊಂಡಿದ್ದು, ಒಂದು ಮೃತದೇಹವನ್ನು ಮಣ್ಣಿನ ಅವಶೇಷಗಳಿಂದ ಹೊರತೆಗೆಯಲಾಗಿದೆ.
ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಅಗೆಯುವ ಯಂತ್ರವನ್ನು ಸ್ಥಳಾಂತರಿಸುವಲ್ಲಿ ರಕ್ಷಣಾ ಸಿಬ್ಬಂದಿ ತೊಂದರೆ ಅನುಭವಿಸಿದ ನಂತರ, ನಾಪತ್ತೆಯಾದವರ ಶೋಧ ಕಾರ್ಯಗಳು ಸ್ಥಗಿತಗೊಂಡಿದ್ದವು ಎಂದು ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದ್ದು, ಎನ್ಡಿಆರ್ಎಫ್ ಸಿಬ್ಬಂದಿ ಒಂದು ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ.
ಮೃತರನ್ನು ತಲಕಾವೇರಿ ದೇವಾಲಯದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಅಣ್ಣಆನಂದ ತೀರ್ಥ(86) ಎಂದು ಗುರುತಿಸಲಾಗಿದೆ.
ಇದೀಗ ನಾರಾಯಣ ಆಚಾರ್ ಕುಟುಂಬದ ಇನ್ನೂ ನಾಲ್ವರ ಶೋಧಕಾರ್ಯಾಚರಣೆ ಮುಂದುವರಿದಿದೆ. ಆದರೆ ಭಾರೀ ಮಳೆ ಕಾರಣಕ್ಕಾಗಿ ಆಗಾಗ ಶೋಧ ಕಾರ್ಯಾಚರಣೆಗೆ ಅಡ್ಡಿ ಉಂಟಾಗುತ್ತಿದೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


