ವಿಜಯಪುರ: ಪ್ರೀತಿಗೆ ಪೋಷಕರ ವಿರೋಧ, ಬಾವಿಗೆ ಹಾರಿ ಯುವಜೋಡಿ ಆತ್ಮಹತ್ಯೆ!
ಅಂತರ್ ಧರ್ಮೀಯ ಪ್ರೇಮ ಎನ್ನುವ ಕಾರಣಕ್ಕೆ ಮದುವೆಗೆ ಪೋಷಕರ ವಿರೋಧ ವ್ಯಕ್ತವಾಗಿದ್ದ ಕಾರಣ ಮನನೊಂದ ಪ್ರೇಮಿಗಳಿಬ್ಬರೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ.

ವಿಜಯಪುರ: ಅಂತರ್ ಧರ್ಮೀಯ ಪ್ರೇಮ ಎನ್ನುವ ಕಾರಣಕ್ಕೆ ಮದುವೆಗೆ ಪೋಷಕರ ವಿರೋಧ ವ್ಯಕ್ತವಾಗಿದ್ದ ಕಾರಣ ಮನನೊಂದ ಪ್ರೇಮಿಗಳಿಬ್ಬರೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಶಿವಾನಂದ್ ಚೌಧರಿ(19) ಎಂದು ಗುರುತಿಸಲಾಗಿದ್ದು ಈತ ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದ್ದನು. ಆದರೆ ಮನೆಯವರ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆ ಇಬ್ಬರೂ ಜತೆಯಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾನುವಾರ ಇಬ್ಬರ ಶವಗಳೂ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದ್ದು ದೇವರಹಿಪ್ಪರಗಿ ಪೊಲೀಸ್ ಠಾಣೆಯ ಪಿಎಸ್‍ಐ ರವಿ ಯಡವಣ್ಣವರ್ ಹಾಗೂ ಇದತ್ರರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ದೇವರಹಿಪ್ಪರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


