ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ: ಎಚ್ ಡಿ ಕುಮಾರಸ್ವಾಮಿ
ವಿಮಾನ ನಿಲ್ದಾಣದಲ್ಲಿ ಡಿಎಂಕೆ ನಾಯಕಿ ಕನ್ನಿಮೋಳಿ ಅವರಿಗೆ ಆದ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ ಎಂದು ಹೇಳಿದ್ದಾರೆ.

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಡಿಎಂಕೆ ನಾಯಕಿ ಕನ್ನಿಮೋಳಿ ಅವರಿಗೆ ಆದ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ ಅವರು, 'ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ ಎಂದು ಹೇಳಿದ್ದಾರೆ.
ಅಂತೆಯೇ 'ಭಾಷೆ ಕಾರಣಕ್ಕೆ ಸಂಸದೆ ಕನ್ನಿಮೋಳಿ ಅವರನ್ನು ‘ನೀವು ಭಾರತೀಯರೇ?’ ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ. ಇದೇ ಹೊತ್ತಲ್ಲೇ, ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


