ಯೂರಿಯಾ ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್
ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ಸಕಾಲಕ್ಕೆ ಯೂರಿಯಾ ರಸಗೊಬ್ಬರ ಸರಬರಾಜು ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಯಾವುದೇ ಕೊರತೆಯಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ.

ಬೆಂಗಳೂರು: ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ಸಕಾಲಕ್ಕೆ ಯೂರಿಯಾ ರಸಗೊಬ್ಬರ ಸರಬರಾಜು ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಯಾವುದೇ ಕೊರತೆಯಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಜೂಲೈನಲ್ಲಿ ಮಂಗಳೂರಿಗೆ ಯೂರಿಯಾ ತುಂಬಿದ ಹಡಗು ಸಕಾಲಕ್ಕೆ ಬರಲಿಲ್ಲ. ಹಾಗಾಗಿ ಸರಬರಾಜಿನಲ್ಲಿ ವ್ಯತ್ಯಾಸವಾಗಿತ್ತು. ಆದರೆ, ಆಗಸ್ಟ್ ತಿಂಗಳಿನಲ್ಲಿ ಯೂರಿಯಾ ರಸಗೊಬ್ಬರಕ್ಕೆ ಅಂದಾಜು 1.77 ಲಕ್ಷ ಟನ್ ಬೇಡಿಕೆಯಿದ್ದು, ಈಗಾಗಲೇ 49,749 ಟನ್ ಸರಬರಾಜಾಗಿದೆ. 19.305 ಟನ್ ಸರಬರಾಜು ಹಂತದಲ್ಲಿದ್ದು, 1,22,446 ಮೆಟ್ರಿಕ್ ಟನ್ ಸರಬರಾಜಿಗೆ ಸಿದ್ಧದೆ ನಡೆದಿದೆ ಎಂದು ತಿಳಿಸಿದ್ದಾರೆ.
ಯೂರಿಯಾಗೆ ದುಪ್ಪಟ್ಟು ಬೆಲೆ ವಿಧಿಸುವುದು, ಪೂರೈಕೆ ಮಾಡಲು ನಿರಾಕರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


