ಕರ್ನಾಟಕ ಲೋಕ ಸೇವಾ ಆಯೋಗದ ಪರೀಕ್ಷೆಗಳ ದಿನಾಂಕ ಪ್ರಕಟ!
ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.
ಇದೇ ತಿಂಗಳ 17ರಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ 'ಎ' ವೃಂದದ ಸಹಾಯಕ ನಿಯಂತ್ರಕರ 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ ಹಾಗೂ ಆಯೋಗದ ವಿಭಾಗೀಯ ಕೇಂದ್ರಗಳಾದ ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗದಲ್ಲಿ ನಡೆಸಲಾಗುತ್ತದೆ.
2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಇದೇ ತಿಂಗಳ 18ರಿಂದ ಸೆಪ್ಟಂಬರ್ 16ರವರೆಗೆ ನಡೆಯಲಿದೆ.
ಇದೇ 24ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 106 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ರಾಯಚೂರು ಮತ್ತು ಶಿವಮೊಗ್ಗದಲ್ಲಿ ನಡೆಯುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


