ಸರ್ಕಾರಕ್ಕೆ ಕೆಟ್ಟ ಹೆಸರು ತರಲು ದುಷ್ಟ ಶಕ್ತಿಗಳ ಪೂರ್ವ ನಿಯೋಜಿತ ಕೃತ್ಯ: ಗೋಪಾಲಯ್ಯ
ಸರ್ಕಾರಕ್ಕೆ ಕೆಟ್ಟ ಹೆಸರು ಕೆಲವು ದುಷ್ಟ ಶಕ್ತಿಗಳು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ

ಹಾಸನ: ಸರ್ಕಾರಕ್ಕೆ ಕೆಟ್ಟ ಹೆಸರು ಕೆಲವು ದುಷ್ಟ ಶಕ್ತಿಗಳು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗಡದುಕೊಂಡು ಶಾಂತಿಯುತವಾಗಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿಲ್ಲ. ಗೃಹಸಚಿವರ ಬಸವರಾಜ ಬೊಮ್ಮಾಯಿ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದು ಹೇಳಿದ್ದಾರೆ.
ನಾನು ಬೆಳಗ್ಗೆಯೇ ಬೆಂಗಳೂರಿನಿಂದ ಬಂದಿದ್ದೇನೆ. ಮಾಧ್ಯಮದಲ್ಲಿ ನೋಡಿ ನನಗೆ ವಿಷಯ ತಿಳಿಯಿತು. ಘಟನೆ ಹಿಂದೆ ಎಸ್‍ಡಿಪಿಐ ಸದಸ್ಯನ ಕೈವಾಡ ಇರುವ ಬಗ್ಗೆ ಗೃಹ ಸಚಿವರು ಮಾಹಿತಿ ನೀಡುತ್ತಾರೆ. ಆದರೆ ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಸಮುದಾಯದ ಮೇಲೆ ಗಲಾಟೆ ಆಗಿಲ್ಲ. ಕೆಲವು ದುಷ್ಟ ಶಕ್ತಿಗಳು ಸರ್ಕಾಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ. ಪರಿಸ್ಥಿತಿಯನ್ನು ಸಮರ್ಥವಾಗಿ ಗೃಹ ಸಚಿವರು ನಿಭಾಯಿಸುತ್ತಾರೆ.
ಸರ್ಕಾರ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


