ಸೋಂಕಿತರಿಗಾಗಿ ಕೋವಿಡ್ ಸುರಕ್ಷಾ ಚಕ್ರ ಸಹಾಯವಾಣಿ ಕೇಂದ್ರ: ಕಲ್ಯಾಣ ಕರ್ನಾಟಕ ಮಂಡಳಿ ನೂತನ ಪ್ರಯೋಗ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೋವಿಡ್ ಸೋಂಕು ತೀವ್ರಗೊಂಡಿದೆ. ಈ ಭಾಗದ ಕೇಂದ್ರ ಸ್ಥಾನ ಕಲಬುರ್ಗಿ ಕೊರೋನಾ ಹಾಟ್ಸ್ಪಾಟ್ ಆಗಿ ಪರಿವರ್ತನೆಯಾಗಿದೆ.

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೋವಿಡ್ ಸೋಂಕು ತೀವ್ರಗೊಂಡಿದೆ. ಈ ಭಾಗದ ಕೇಂದ್ರ ಸ್ಥಾನ ಕಲಬುರ್ಗಿ ಕೊರೋನಾ ಹಾಟ್ಸ್ಪಾಟ್ ಆಗಿ ಪರಿವರ್ತನೆಯಾಗಿದೆ.
ಕೆಕೆಆರ್ಡಿಬಿ ಕಛೇರಿಯಲ್ಲಿ ಕೋವಿಡ್-19 ಸುರಕ್ಷಾ ಚಕ್ರ ಸಹಾಯವಾಣಿ ಕೇಂದ್ರ ಆರಂಭಿಸಿದೆ. ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಸಹಾಯವಾಣಿ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಆ್ಯಂಬುಲೆನ್ಸ್ ಸೌಲಭ್ಯ, ಥ್ರೋಟ್ ಸ್ಯಾಂಪಲ್ ಟೆಸ್ಟ್, ಬೆಡ್ ಲಭ್ಯತೆ, ಎಲ್ಲಿ ಚಿಕಿತ್ಸೆ ಸಿಗುವುದೆಂಬ ಇತ್ಯಾದಿ ಮಾಹಿತಿಯನ್ನು ಇಲ್ಲಿಂದ ಪಡೆದುಕೊಳ್ಳಬಹುದಾಗಿದೆ.
ಸುರಕ್ಷಾ ಚಕ್ರ ಸಹಾಯವಾಣಿಗೆ ಕರೆ ಮಾಡಿದ ಅರ್ಧ ಗಂಟೆಯೊಳಗೆ ಅಗತ್ಯ ಮಾಹಿತಿ ಜೊತೆಗೆ, ಅಗತ್ಯ ಸೌಕರ್ಯ ನೀಡಲು ಕ್ರಮ ಕೈಗೊಳ್ಳಲಾಗುವುದು. ದಿನದ 24 ತಾಸುಗಳ ಕಾಲ ಈ ಕೇಂದ್ರ ಕಾರ್ಯನಿರ್ವಹಿಸಲಿದೆ. ಚಿಕಿತ್ಸೆ ನಂತರ ಡಿಸ್ಚಾರ್ಜ್ ಆದ ರೋಗಿಗಳ ಮೇಲೆ 1 ತಿಂಗಳ ಕಾಲ ನಿಗಾ ಇಡಲಾಗುತ್ತದೆ. ಕೆಕೆಆರ್ಡಿಬಿ ಹಾಗೂ ಜಿಲ್ಲಾಧಿಕಾರಿ ಕಛೇರಿಗಳಿಂದಲೇ ಕೇಂದ್ರದ ಕಾರ್ಯಾಚರಣೆ ಮಾನಿಟರ್ ಮಾಡಬಹುದಾಗಿದೆ.
ಕೆಕೆಆರ್ಡಿಬಿ ಪ್ರಯತ್ನಕ್ಕೆ ಕಲಬುರ್ಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿಗಳು ಕೈಜೋಡಿಸಿವೆ. ಸದ್ಯಕ್ಕೆ ಕಲಬುರಗಿ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕದ ಇತರೆ ಜಿಲ್ಲೆಗಳಿಗೂ ಇದನ್ನು ವಿಸ್ತರಿಸಲಾಗುವುದು ಎಂದು ದತ್ತಾತ್ರೇಯ ಪಾಟೀಲ ರೇವೂರ ಮಾಹಿತಿ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ದುಬಾರಿ ಬಿಲ್ ವಿಧಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಜಾಧವ್, ಈ ವಿಷಯ ತಮ್ಮ ಗಮನಕ್ಕೆ ಬಂದಿಲ್ಲ. ಯಾವುದೇ ಖಾಸಗಿ ಆಸ್ಪತ್ರೆ ಸರ್ಕಾರದ ಮಾರ್ಗಸೂಚಿ ಮೀರಿ ಹೆಚ್ಚಿನ ದರ ವಿಧಿಸುವಂತಿಲ್ಲ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಂಸದ ಉಮೇಶ್ ಜಾಧವ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


