ಶಾಸಕ ಲಾಲಾಜಿ ಆರ್. ಮೆಂಡನ್‌ಗೆ ಕೊರೋನಾ ಸೋಂಕು
ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಅರ್. ಮೆಂಡನ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಅರ್. ಮೆಂಡನ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಬಗ್ಗೆ ಅವರು ತಮ್ಮ ಫೇಸ್‍ಬುಕ್ ಪೇಜ್‍ನಲ್ಲಿ ಬರೆದುಕೊಂಡಿದ್ದು, ತಮ್ಮ ಆಪ್ತ ಕಾರ್ಯದರ್ಶಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಕಳೆದ 7 ದಿನಗಳಿಂದ ಹೋಂ ಕಾರಂಟೈನ್ ನಲ್ಲಿದ್ದು, ಮುಂಜಾಗೃತಾ ಕ್ರಮವಾಗಿ ನಾನು ಪರೀಕ್ಷೆ ಮಾಡಿಸಿದಾಗ ಕೋವಿಡ್ 19 ಸೋಂಕು ದೃಢಪಟ್ಟಿದೆ. ಯಾವುದೇ ಸೋಂಕಿನ ಲಕ್ಷಣಗಳು ಇಲ್ಲದಿರುವುದರಿಂದ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಅಗತ್ಯ ಕಾರ್ಯಗಳಿಗೆ ಕಚೇರಿಯನ್ನು ಸಂಪರ್ಕಿಸಿ. ನಾನು ಆದಷ್ಟು ಬೇಗ ಕಾಪು ಜನತೆಯ ಸೇವೆಗೆ ಮರಳುತ್ತೇನೆ, ತಮ್ಮ ಸಹಕಾರವಿರಲಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಶಾಸಕರ ಆಪ್ತ ಕಾರ್ಯದರ್ಶಿಗೆ ಕಳೆದ ವಾರ ಸೋಂಕು ಧೃಡಪಟ್ಟಿದ್ದು, ಆ ಬಳಿಕ ಶಾಸಕರು ಸ್ವಯಂ ಕ್ವಾರಂಟೈನ್‌ಗಿದ್ದರು. ವಾರದ ಬಳಿಕ ಪರೀಕ್ಷೆಗೊಳಗಾದ ಲಾಲಾಜಿ ಆರ್ ಮೆಂಡನ್ ವರದಿಯಲ್ಲಿ ಸೋಂಕು ಧೃಡಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


