ಮಂಗಳೂರು: ನಾಯಿಗೆ ಕೃಷ್ಣನ ವೇಷ ಹಾಕಿ ವಿವಾದಕ್ಕೀಡಾದ ಯುವತಿ
ತಮ್ಮ ಮುದ್ದಿನ ನಾಯಿಗೆ ಕೃಷ್ಣನ ವೇಷ ತೊಡಿಸಿ, ಆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಮಾಡೆಲ್ ಅವರು ನಾಯಿಗೆ ಕೃಷ್ಣನ ವೇಷ ಹಾಕಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಪೋಸ್ಟ್ಅನ್ನು ಡಿಲಿಟ್ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು: ತಮ್ಮ ಮುದ್ದಿನ ನಾಯಿಗೆ ಕೃಷ್ಣನ ವೇಷ ತೊಡಿಸಿ, ಆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಮಾಡೆಲ್ ಅವರು ನಾಯಿಗೆ ಕೃಷ್ಣನ ವೇಷ ಹಾಕಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಪೋಸ್ಟ್ಅನ್ನು ಡಿಲಿಟ್ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಈ ಯುವತಿ ಮಂಗಳೂರಿನವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಂದು ತಿಳಿದುಬಂದಿದೆ. ನಾಯಿಮರಿಗೆ ಕೃಷ್ಣ ವೇಷ ಹಾಕಿ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಕೋರಿದ್ದರು. ಅನೇಕರು ಲೈಕ್ಸ್‌ಗಳನ್ನು ಹಾಕಿದ್ದರೆ, ಇನ್ನೂ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.
ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹಿಂದುಗಳೆಲ್ಲ ತಮ್ಮ ಮಕ್ಕಳಿಗೆ ಕೃಷ್ಣನ ವೇಷ ಹಾಕಿ, ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅದರಂತೆ ಮಂಗಳೂರು ಮೂಲದ ಮಾಡೆಲಿಂಗ್ ಕ್ಷೇತ್ರದಲ್ಲಿರುವ ಯುವತಿ ತನ್ನ ನಾಯಿ ಮರಿಗೆ ಕೃಷ್ಣನ ವೇಷ ಹಾಕಿದ್ದಾರೆ. ಬಳಿಕ ಆ ಚಿತ್ರವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


