ಡಿ.ಜೆ.ಹಳ್ಳಿ ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿಲ್ಲ- ಶಾಸಕ ಜಮೀರ್ ಅಹಮದ್
ಡಿ.ಜೆ.ಹಳ್ಳಿ ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿದೆ ಎಂಬ ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆಂಬ ಆರೋಪವನ್ನು ಸ್ವತಃ ಶಾಸಕ ಜಮೀರ್ ಅಹಮದ್ ಅಲ್ಲಗಳೆದಿದ್ದಾರೆ.

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿದೆ ಎಂಬ ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆಂಬ ಆರೋಪವನ್ನು ಸ್ವತಃ ಶಾಸಕ ಜಮೀರ್ ಅಹಮದ್ ಅಲ್ಲಗಳೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜಮೀರ್ ಅಹಮದ್ ಖಾನ್ ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರ ವಾದುದು. ಕಪೋಲ ಕಲ್ಪಿತ ವರದಿಗಳನ್ನು ಪ್ರಸಾರ ಮಾಡುವ ಮೂಲಕ ಮಾಧ್ಯಮಗಳು ತಮ್ಮ ಘನತೆಗೆ ಕುಂದುಂಟು ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.
'ನಿನ್ನೆಯ ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ನಮ್ಮ ಪಕ್ಷದ ಮುಖಂಡರಾದ ಸಂಪತ್ ಅವರ ಕೈವಾಡವಿದೆ ಎಂದು ನಾನು ಕೆಲವರ ಬಳಿ ಹೇಳಿದ್ದೇನೆ ಎಂಬ ಸುಳ್ಳು ಸುದ್ದಿ ಮಾಧ್ಯಮವೊಂದರಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಮಾಧ್ಯಮಗಳಿಗೆ ನನ್ನದೊಂದು ಮನವಿ, ದಯವಿಟ್ಟು ಕಲ್ಪಿತ ವರದಿಗಳನ್ನು ಪ್ರಸಾರ ಮಾಡಿ ಜನರಿಗೆ ತಪ್ಪು ಸಂದೇಶ ನೀಡಬೇಡಿ'.
'ಹಲವು ವರ್ಷಗಳಿಂದ ಸಂಪತ್ ಅವರು ನನಗೆ ಪರಿಚಿತರು. ಅವರು ನಮ್ಮ ಪಕ್ಷದ ಕಾರ್ಪೊರೇಟರ್ ಕೂಡ ಹೌದು. ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವೆಂದೇ ಕರೆಯಲ್ಪಡುವ ಮಾಧ್ಯಮಗಳ ವರದಿಗಳು ವಸ್ತುನಿಷ್ಠ ಮತ್ತು ನ್ಯಾಯಯುತವಾಗಿರಬೇಕು. ಸುಳ್ಳು ಸುದ್ದಿಗಳಿಂದ ಆ ಘನತೆಗೆ ಧಕ್ಕೆಯಾಗುತ್ತದೆ' ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


