ಈ ವರ್ಷ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಲ್ಲ; ಸರ್ಕಾರದ ಕಟ್ಟುನಿಟ್ಟಿನ ಆದೇಶ
ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರು ನಗರದಲ್ಲಿ ಗಣೇಶ ಚತುರ್ದಶಿಯ ಸಾರ್ವಜನಿಕ ಆಚರಣೆ ನಡೆಯುವುದಿಲ್ಲ.

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರು ನಗರದಲ್ಲಿ ಗಣೇಶ ಚತುರ್ದಶಿಯ ಸಾರ್ವಜನಿಕ ಆಚರಣೆ ನಡೆಯುವುದಿಲ್ಲ.
ಸಾಂಕ್ರಾಮಿಕ ಹರಡದಂತೆ ಎಚ್ಚರವಹಿಸಲು ಸಾರ್ವಜನಿಕರು ಗುಂಪು ಸೇರುವುದನ್ನು ತಡೆಯುವುದು ಅನಿವಾರ್ಯವಾದ್ದರಿಂದ ಈ ವರ್ಷ ಸರಳ ರೀತಿಯಲ್ಲಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಯಲ್ಲಿಯೇ ಹಬ್ಬ ಆಚರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಪ್ರತಿ ವರ್ಷದಂತೆ ಈ ಬಾರಿ ರಸ್ತೆ, ಗಲ್ಲಿ, ಮೈದಾನ ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ. ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳನ್ನು ಮೂರ್ತಿಯನ್ನು ವಿಸರ್ಜಿಸುವಂತಿಲ್ಲ ಎಂದು ಆದೇಶ ತಿಳಿಸಿದೆ.
ಬಿಬಿಎಂಪಿ ಈ ಸಂಬಂಧ ಮಾರ್ಗಸೂಚಿಯನ್ನು ಹೊರಡಿಸಿದ್ದು "ಮನೆ ಅಥವಾ ದೇವಾಲಯದಲ್ಲಿ ಸರಳವಾಗಿ ಗಣೇಶನ ಹಬ್ಬ ಆಚರಿಸಬೇಕು, ಯಾವ ಕಾರಣಕ್ಕೂ ಸಾರ್ವಜನಿಕ ಗಣೇಶೋತ್ಸವ ಅಥವಾ ಗಣೇಶ ವಿಸರ್ಜನೆ ಮೆರವಣಿಗೆಗೆ ಅವಕಾಶವಿಲ್ಲ.
"ಮನೆ ಆವರಣದಲ್ಲೇ ಗಣೇಶ ವಿಸರ್ಜನೆಗೆ ಮಾತ್ರ ಅವಕಾಶ, ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. 6 ಅಡಿ ಅಂತರ ಕಾಪಾಡಿಕೊಳ್ಳಬೇಕು. ಮುಖಗವಸು ಕಡ್ಡಾಯ. ಮಾರ್ಗಸೂಚಿ ಉಲ್ಲಂಘಿಸಿದವರಿಗೆ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುವುದು" ಪ್ರಕಟಣೆ ಹೇಳಿದೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


