ಕೊಯ್ನಾ ಜಲಾಶಯ ಪ್ರದೇಶದಲ್ಲಿ ಭೂಕಂಪ: ರಾಜ್ಯದ ಕೃಷ್ಣಾ ನದಿ ಪಾತ್ರದಲ್ಲಿ ಆತಂಕ ಸೃಷ್ಟಿ
ಮಹಾರಾಷ್ಟ್ರದ ಸತಾರ ಜಿಲ್ಲೆಯ ಕೊಯ್ನಾ ಅಣೆಕಟ್ಟು ಬಳಿ ಶನಿವಾರ ಬೆಳಿಗ್ಗೆ 3.1 ತೀವ್ರತೆಯ ಭೂಕಂಪ ಸಂಭವಿಸುವುದರೊಂದಿಗೆ ರಾಜ್ಯದ ಕೃಷ್ಣ ನದಿ ಪಾತ್ರದಲ್ಲಿ ಆತಂಕ ಸೃಷ್ಟಿಯಾಗಿತ್ತು.

ವಿಜಯಪುರ: ಮಹಾರಾಷ್ಟ್ರದ ಸತಾರ ಜಿಲ್ಲೆಯ ಕೊಯ್ನಾ ಅಣೆಕಟ್ಟು ಬಳಿ ಶನಿವಾರ ಬೆಳಿಗ್ಗೆ 3.1 ತೀವ್ರತೆಯ ಭೂಕಂಪ ಸಂಭವಿಸುವುದರೊಂದಿಗೆ ರಾಜ್ಯದ ಕೃಷ್ಣ ನದಿ ಪಾತ್ರದಲ್ಲಿ ಆತಂಕ ಸೃಷ್ಟಿಯಾಗಿತ್ತು.
ರಿಕ್ಟರ್ ಮಾಪಕದದಲ್ಲಿ 3.1 ತೀವ್ರತೆಯ ಲಘು ಭೂಕಂಪ ಶನಿವಾರ ಬೆಳಿಗ್ಗೆ 10.22ಕ್ಕೆಸಂಭವಿಸಿದೆ. ಇದರ ಕೇಂದ್ರಬಿಂದು ಕೊಯ್ನಾ ಅಣೆಕಟ್ಟಿನಿಂದ 13.60 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಭೂಕಂಪದ ಸುದ್ದಿ ಹರಡುತ್ತಿದ್ದಂತೆ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೃಷ್ಣಾ ನದಿ ತೀರದಲ್ಲಿ ವಾಸಿಸುವ ಜನರು ಆತಂಕಕ್ಕೊಳಗಾಗಿದ್ದರು.
ಕೊಯ್ನಾ ಅಣೆಕಟ್ಟಿನಿಂದ ಹೆಚ್ಚು ನೀರು ಬಿಡುಗಡೆಯಾದರೆ ಸಂಭವನೀಯ ಪ್ರವಾಹದ ಭೀತಿಗೆ ನದಿ ಪಾತ್ರದ ಜನರು ಒಳಗಾಗಿದ್ದರು. ಆದರೆ, ಭೂಕಂಪನದಿಂದಾಗಿ ಅಣೆಕಟ್ಟಿಗೆ ಯಾವುದೇ ರೀತಿ ಹಾನಿಯಾಗಿಲ್ಲ.ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಉದ್ದೇಶವೂ ಇಲ್ಲ ಎಂದು ಅಣೆಕಟ್ಟಿನ ಅಧಿಕಾರಿಗಳು ದೃಢಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


