ರಾಜ್ಯ

ಎಸ್'ಡಿಪಿಐ, ಪಿಎಫ್ಐ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ: ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಎಸ್'ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವ ಕುರಿತು ಗಂಭೀರವಾಗಿ ಚಿಂತನೆಗಲನ್ನು ನಡೆಸಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆ ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕಂದಾಯ ಸಚಿನ ಆರ್.ಅಶೋಕ್ ಅವರು ಶುಕ್ರವಾರ ಹೇಳಿದ್ದಾರೆ,

ಎಸ್'ಡಿಪಿಐ, ಪಿಎಫ್ಐ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ: ಸಚಿವ ಆರ್.ಅಶೋಕ್
ಸಚಿವ ಆರ್.ಅಶೋಕ್
Published On :

ಬೆಂಗಳೂರು: ರಾಜ್ಯದಲ್ಲಿ ಎಸ್'ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವ ಕುರಿತು ಗಂಭೀರವಾಗಿ ಚಿಂತನೆಗಲನ್ನು ನಡೆಸಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆ ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕಂದಾಯ ಸಚಿನ ಆರ್.ಅಶೋಕ್ ಅವರು ಶುಕ್ರವಾರ ಹೇಳಿದ್ದಾರೆ,

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಗಲಭೆ ಪ್ರಕರಣದಲ್ಲಿ ಎಸ್'ಡಿಪಿಐಗೆ ನೇರ ಸಂಬಂಧ ಇದೆ. ಇದಲ್ಲದೇ, ರಾಜ್ಯದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಮುಖಂಡರ ಹತ್ಯೆಯಲ್ಲಿ ಎಸ್'ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳ ಕೈವಾಡವಿದ್ದು, ಇದಕ್ಕೆ ಸಾಕ್ಷಿ ಇದೆ. ಹೀಗಾಗಿ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡು ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಯಾವುದೇ ದೇಶದ್ರೋಹಿ ಸಂಘಟನೆಗಳು ಇರಬಾರದು. ನಗರದ ಕೆ.ಜಿ. ಹಳ್ಳಿ ಹಾಗೂ ಡಿಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ಎಸ್'ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿರ್ಬಂಧಿಸುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಲಾಗಿದ್ದು, ಕೆಲ ಪ್ರಕ್ರಿಯೆ ಸಹ ಪ್ರಾರಂಭಿಸಲಾಗಿದೆ. ಗೃಹ ಇಲಾಖೆಯಿಂದ ಎಸ್'ಡಿಪಿಐ ಕೃತ್ಯಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಮುಖ್ಯಮಂತ್ರಿಗಳು ಸೂಚನೆ ಕೊಟ್ಟ ತರುವಾಯ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು. 

ಎಸ್'ಡಿಪಿಐ ಮತ್ತು ಪಿಎಫ್ಐ ಸಂಘಟನೆ ಸಾಕಷ್ಟು ಕೃತ್ಯದಲ್ಲಿ ಭಾಗಿಯಾಗಿದೆ. 2008ರಿಂದ 2020ರವರೆಗೆ ಒಟ್ಟು 17 ಪ್ರಕರಣದಲ್ಲಿ ನೇರ ಭಾಗಿಯಾಗಿವೆ. ಹಿಂದೂ ಪರ ಸಂಘಟನೆ, ಬಿಜೆಪಿ ನಾಯಕರು, ಕಾರ್ಯಕರ್ತರು ಇವರಿಗೆ ನೇರ ಟಾರ್ಗೆಟ್. ಇದು ಕೋಮುಗಲಭೆ ಅಲ್ಲ. ರಾಜಕೀಯ ಸಂಘರ್. ಹೀಗಾಗಿ ಯಾವುದೇ ರೀತಿಯ ಶಾಂತಿ ಸಭೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.