ಹಿರಿಯ ಪತ್ರಕರ್ತ ಸೋಮಶೇಖರ ಯಡವಟ್ಟಿ ನಿಧನ: ಮುಖ್ಯಮಂತ್ರಿ ಬಿಎಸ್ ವೈ ಸಂತಾಪ
ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು: ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಂಯುಕ್ತ ಕರ್ನಾಟಕದ ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸರಳ, ಸಜ್ಜನ ವ್ಯಕ್ತಿ ಯಾಗಿದ್ದ ಅವರು ತಮ್ಮ ನಿಷ್ಪಕ್ಷಪಾತ ಹಾಗೂ ವಸ್ತುನಿಷ್ಠ ವರದಿಗಾರಿಕೆಯಿಂದ ಹೆಸರುವಾಸಿಯಾಗಿದ್ದರು. ಇತ್ತೀಚೆಗೆ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನನ್ನ ಸಂದರ್ಶನ ಮಾಡಿದ್ದು ನನ್ನ ನೆನಪಿನಂಗಳದಲ್ಲಿ ಇನ್ನೂ ಹಚ್ಚ ಹಸಿರಾಗಿದೆ. ಯಡವಟ್ಟಿ ಅವರ ನಿಧನದಿಂದ ಮಾಧ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿಯನ್ನು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.
ಸೋಮಶೇಖರ್ ಯಡವಟ್ಟಿ (50 ವರ್ಷ) ಪ್ರಸ್ತುತ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ಮುಖ್ಯ ವರದಿಗಾರರಾಗಿದ್ದರು. ಕೊರೊನಾ ಸೋಂಕಿತರಾಗಿದ್ದ ಅವರು ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಧಾರವಾಡ ಮೂಲದ ಸೋಮಶೇಖರ್ ಯಡವಟ್ಟಿ ಈ ಟಿವಿ, ಕರುನಾಡ ಸಂಜೆ, ಉದಯವಾಣಿ ಸೇರಿದಂತೆ ಹಲವು ಪತ್ರಿಕಾ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದರು. ಶುಕ್ರವಾರದ ತನಕ ಕೆಲಸ ಮಾಡಿದ್ದ ಅವರು ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


