ರಾಜ್ಯ

ಗೂಂಡಾ ಕಾಯ್ದೆಯಡಿ ಬಂಧನ, ನಷ್ಟ ವಸೂಲಿ; ಗಲಭೆಕೋರರ ಹೆಡೆಮುರಿಕಟ್ಟಲು ಮುಂದಾದ ಸರ್ಕಾರ, ಬಿಎಸ್ ವೈ ಸಭೆಯ ಪ್ರಮುಖಾಂಶಗಳು!

ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಗಲಭೆ ಕೋರರ ಹೆಡೆಮುರಿ ಕಟ್ಟಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಗೂಂಡಾ ಕಾಯ್ದೆಯಡಿ ಬಂಧನ, ನಷ್ಟ ವಸೂಲಿ; ಗಲಭೆಕೋರರ ಹೆಡೆಮುರಿಕಟ್ಟಲು ಮುಂದಾದ ಸರ್ಕಾರ, ಬಿಎಸ್ ವೈ ಸಭೆಯ ಪ್ರಮುಖಾಂಶಗಳು!
ಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಸಿಎಂ ಸಭೆ
Published On :

ಬೆಂಗಳೂರು: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ ಬೆಂಗಳೂರಿನ ಡಿಜೆ  ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಗಲಭೆ ಕೋರರ ಹೆಡೆಮುರಿ ಕಟ್ಟಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಈ ಬಗ್ಗೆ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಗಲಭೆ ಮಾಡುವವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಗಲಭೆಯಿಂದ ಸಂಭವಿಸಿದ ನಷ್ಟವನ್ನೂ ಅವರಿಂದಲೇ ವಸೂಲಿ ಮಾಡುವಂತೆ ಸೂಚಿಸಿದ್ದು, ಈ ಸಂಬಂಧ ಕೈಗೊಳ್ಳಬೇಕಾದ ಕಾನೂನು ರೀತಿಯ ಕ್ರಮಗಳನ್ನು ಜರುಗಿಸುವಂತೆಯೂ ಸೂಚನೆ ನೀಡಿದ್ದಾರೆ.

ಉಳಿದಂತೆ ಸಿಎಂ ಸಭೆಯ ಪ್ರಮುಖಾಂಶಗಳು:
1. ಆರೋಪಿಗಳ ತ್ವರಿತ ವಿಚಾರಣೆಗಾಗಿ, ಕಾನೂನು ಪ್ರಕ್ರಿಯೆಗಳಿಗಾಗಿ ಮೂವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗಳ ನೇಮಕ.
2. ಗಲಭೆಯಡಿ ಬಂಧಿಸಿರುವ ಆರೋಪಿಗಳ ಜತೆ ಉಗ್ರ ಸಂಘಟನೆಗಳ ಲಿಂಕ್ ಇದ್ಯಾ ಅನ್ನೋ ಬಗ್ಗೆ ಬಗ್ಗೆ ಪರಿಶೀಲನೆಗೆ ನಿರ್ಧಾರ.
3. ಘಟನೆಯಿಂದ ಆಗಿರುವ ಆಸ್ತಿಪಾಸ್ತಿ ನಷ್ಟ ವಸೂಲಿಗೆ ಕ್ಲೇಂ ಕಮೀಷನರ್ ನೇಮಕ ಮಾಡುವಂತೆ ಹೈಕೋರ್ಟ್ ಗೆ ಮನವಿ ಸಲ್ಲಿಕೆಗೆ ನಿರ್ಧಾರ.
4. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಹಿಂದೆ ಕೇಸ್ ಇದ್ದರೆ ಪರಿಶೀಲಿಸಿ ಅಂತಹವರ ಮೇಲೆ ಗೂಂಡಾ ಕಾಯ್ದೆಯ ಅಡಿ ಹಾಕಲು ನಿರ್ಧಾರ.
5. ಪ್ರಕರಣದಲ್ಲಿ ಭಾಗಿಯಾದವರು ಇತರೇ ಸಂಘಟನೆಗಳ ಜೊತೆ ಗುರ್ತಿಸಿಕೊಂಡಿರುವ ಬಗ್ಗೆ ಪರಿಶೀಲನೆ.
6. ಪ್ರಕರಣದ ಹಿಂದಿರುವ ರಾಜಕೀಯ ಕಾರಣಗಳ ಬಗ್ಗೆಯೂ ಪರಿಶೀಲನೆ.
7. ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಒಂದೇ ತನಿಖಾ ತಂಡದಿಂದ ಮಾತ್ರ ಸದ್ಯಕ್ಕೆ ತನಿಖೆ. ಇದರಲ್ಲೂ ಸದ್ಯಕ್ಕೆ ಬದಲಾವಣೆ ಇಲ್ಲ.
8. ಗೋಲಿಬಾರ್ ಪ್ರಕರಣವೂ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ. ಇದರಲ್ಲಿ ಬದಲಾವಣೆ ಇಲ್ಲ.
9. ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿರ್ಬಂಧ ಕಾಯ್ದೆಯಡಿಯೂ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಇನ್ನು ಇಂದಿನ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್, ಗುಪ್ತವಾರ್ತೆ ವಿಭಾಗದ ಎಡಿಜಿಪಿ ಬಿ. ದಯಾನಂದ, ಪೊಲೀಸ್‌ ಕಮಿಷನರ್‌, ಕಮಲ್‍ಪಂತ್, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಮರ ಕುಮಾರ್ ಪಾಂಡೆ ಇದ್ದರು.

Related Article

ಡಿಜೆ ಹಳ್ಳಿ ಗಲಭೆ; ಆಸ್ತಿ ನಷ್ಟ ವಸೂಲಿಗೆ ಸರ್ಕಾರ ಕ್ರಮ, ಕ್ಲೇಮ್ ಕಮಿಷನರ್ ನೇಮಿಸುವಂತೆ ಹೈಕೋರ್ಟ್‌ಗೆ ಮನವಿ

ಡಿಜೆ ಹಳ್ಳಿ ಗಲಭೆ ಪ್ರಕರಣ: ಜೈಲಿನಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ ಗಲಭೆಕೋರರು

ಬೆಂಗಳೂರು ಗಲಭೆ: ಡಿ.ಜೆ.ಹಳ್ಳಿ ಠಾಣೆ ಎದುರು ಶುರುವಾಯ್ತು ಹೈಡ್ರಾಮಾ

ಡಿಜೆ ಹಳ್ಳಿ ಗಲಭೆ ಪ್ರಕರಣ: ಕರ್ನಾಟಕ ಟಿಪ್ಪು ಟೈಗರ್ ಅಲ್ಫತ್ ಟ್ರಸ್ಟ್ ಅಧ್ಯಕ್ಷ ಖಾಕಿ‌ ವಶಕ್ಕೆ

ಬೆಂಗಳೂರು ಗಲಭೆ: ಘಟನಾ ಸ್ಥಳಕ್ಕೆ ಬಿಜೆಪಿ ಸಮಿತಿ ಭೇಟಿ, ಪರಿಶೀಲನೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.