ಲಾಕ್ ಡೌನ್ ಆರ್ಥಿಕ ಸಂಕಷ್ಟ; 'ಮಿಸ್ಟರ್ ಕೊಪ್ಪ' ಕೀರ್ತಿಗೆ ಪಾತ್ರರಾಗಿದ್ದ ಜಿಮ್ ತರಬೇತುದಾರ ಆತ್ಮಹತ್ಯೆ
ಕೊರೊನಾ ಲಾಕ್‌ಡೌನ್‌ನಿಂದ ಜಿಮ್ ಚಟುವಟಿಕೆ ಸ್ಥಗಿತಗೊಳಿಸಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾದ ಜಿಮ್ ತರಬೇತುದಾರರೊಬ್ಬರು ಜಿಮ್‍ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.

ಚಿಕ್ಕಮಗಳೂರು: ಕೊರೊನಾ ಲಾಕ್‌ಡೌನ್‌ನಿಂದ ಜಿಮ್ ಚಟುವಟಿಕೆ ಸ್ಥಗಿತಗೊಳಿಸಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾದ ಜಿಮ್ ತರಬೇತುದಾರರೊಬ್ಬರು ಜಿಮ್‍ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.
ಜಯಪುರ ಸಮೀಪದ ದೂಬ್ಳ ಗ್ರಾಮದ ಸುನಿಲ್ (26)ಆತ್ಮಹತ್ಯೆಗೆ ಶರಣಾದವರು. ಸುನಿಲ್ ಜಯಪುರದಲ್ಲಿ ಜಿಮ್ ಸೆಂಟರ್ ನಡೆಸುತ್ತಾ, 30ರಿಂದ 40 ಮಂದಿ ಯುವಕರಿಗೆ ಜಿಮ್ ಬಗ್ಗೆ ತರಬೇತಿ ಕೊಡುತ್ತಿದ್ದರು.
ಕಳೆದ ನಾಲ್ಕೈದು ತಿಂಗಳಿಂದ ಕೊರೊನಾ ಲಾಕ್‌ಡೌನ್‌ನಿಂದಾಗಿ ಜಿಮ್ ನಡೆಸಲು ಅವಕಾಶ ಇಲ್ಲದಿದ್ದುದರಿಂದ ಸುನೀಲ್ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು.
ಜಿಮ್ ನಡೆಸಲಾಗದೆ ಹೋದ ಸುನೀಲ್ ಕಳೆದ ಮೂರು ತಿಂಗಳಿನಿಂದ ಆಟೋ ಚಾಲಕನಾಗಿ ಕೆಲಸ ಮಾಡಿತ್ತಿದ್ದರು. ಆದರೆ ಆರ್ಥಿಕ ಸಂಕಷ್ಟ ಬಗೆಹರಿಯದೆ ಮಾನಸಿಕ ಒತ್ತಡಕ್ಕೆ ಒಳಗಾದ ಸುನೀಲ್ ಭಾನುವಾರ ಜಿಮ್ ನಲ್ಲೇ ಆತ್ಮಹತ್ಯೆಗೆ ಶರಣಗಿದ್ದಾರೆ.
ಮೃತರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದೇಹದಾಢ್ಯ ಸ್ಪರ್ಧೆಗಳಲ್ಲಿ ಭಾಗವಹಿದ್ದು ಅಲ್ಲದೆ ಕಳೆದ ವರ್ಷ ಮಿಸ್ಟರ್ ಕೊಪ್ಪ ದೇಹದಾಢ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ್ದರು,
ಘಟನಾ ಸ್ಥಳಕ್ಕೆ ಜಯಪುರ ಪೋಲೀಸರು ಭೇಟಿ ಕೊಟ್ಟು ಪರಿಶೀಲನೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


