ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು; ಕೆಲವೆಡೆ ಪ್ರವಾಹ ಭೀತಿ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆ ಮುಂದುವರಿದಿದ್ದು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ.

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆ ಮುಂದುವರಿದಿದ್ದು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇನ್ನು ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮತ್ತು ರಾಜ್ಯದಲ್ಲೂ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಈ ಬಾರಿಯೂ ಪ್ರವಾಹದ ಭೀತಿ ಎದುರಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ. 19ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಮಲೆನಾಡಿನ ಜಿಲ್ಲೆಯಾದ ಚಿಕ್ಕಮಗಳೂರಿನಲ್ಲೂ ಮಳೆಯ ಅಬ್ಬರ ಜೋರಾಗಿದೆ. ಭಾರೀ ಗಾಳಿ ಮಳೆಗೆ ಮೂಡಿಗೆರೆ ತಾಲೂಕಿನ ಹೊರಟ್ಟಿ ಹಾಗೂ ಕಲ್ಮನೆ ಗ್ರಾಮದಲ್ಲಿ ಎರಡು ಮನೆಗಳು ಸಂಪೂರ್ಣ ಜಖಂಗೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


